Advertisement
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಅವರು ಸಿಲಿಕಾನ್ ಸಿಟಿವೆಂದು ಖ್ಯಾತಿ ಹೊಂದಿರುವ ಬೆಂಗಳೂರು ಮತ್ತು ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಚಿಕ್ಕಬಳ್ಳಾಪುರ ನಗರವನ್ನು ಮಾದರಿಯಾಗಿ ಅಭಿವೃದ್ದಿಗೊಳಿಸುವುದಾಗಿ ಆರೋಗ್ಯ ಸಚಿವರು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಹೊರತು ಅಭಿವೃಧ್ಧಿ ಶೂನ್ಯವಾಗಿದೆ ಟೀಕಿಸಿದ ಅವರು ಚಿಕ್ಕಬಳ್ಳಾಪುರ ವಿಧಾನಸಸಭಾ ಕ್ಷೇತ್ರದಲ್ಲಿ ಕೇವಲ ವೈದ್ಯಕೀಯ ಶಿಕ್ಷಣ ಕಾಲೇಜು ಮಂಜೂರು ಮಾಡಿದರೆ ಎಲ್ಲವೂ ಅಭಿವೃದ್ದಿಯಾಗಿದೆ ಎಂಬ ಅರ್ಥವಲ್ಲ ಕಾಲೇಜಿನ ಜೊತೆಗೆ ಕ್ಷೇತ್ರದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಚಿವರು ಕಾರ್ಯನಿರ್ವಹಿಸಬೇಕೆಂದು ಆಗ್ರಹಿಸಿದರು.
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುತ್ತಿದ್ದೇನೆ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇನೆ ಕ್ಷೇತ್ರದಲ್ಲಿರುವ ಎಲ್ಲಾ ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಜೊತೆಗೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಾಗಿದೆ ತಮ್ಮ ತಾಯಿಯ ಹೆಸರಿನಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸುವ ಕನಸನ್ನು ಹೊಂದಿದ್ದೇನೆ ಅದನು ನನಸು ಮಾಡುವ ಮೂಲಕ ಕ್ಷೇತ್ರದ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕೆಲಸವನ್ನು ಮಾಡುವುದಾಗಿ ವಾಗ್ದಾನ ಮಾಡಿದರು. ಇದನ್ನೂ ಓದಿ : ಮಾರ್ಚ್ 4 ರಂದು ಮಧ್ಯಾಹ್ನ 12.30 ಕ್ಕೆ ಚೊಚ್ಚಲ ಬಜೆಟ್ ಮಂಡಿಸಲಿರುವ ಸಿಎಂ
Related Articles
ನಗರಸಭೆಯ ಅಧ್ಯಕ್ಷ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ನಗರಸಭಾ ಸದಸ್ಯರನ್ನು ರಾಜಕೀಯ ಒತ್ತಡಗಳಿಗೆ ಜಿಲ್ಲಾಧಿಕಾರಿಗಳು ತೀರ್ಪು ನೀಡಿದ್ದಾರೆ ಅದರ ವಿರುಧ್ಧ ರಾಜ್ಯ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿ ವಿಪ್ ಉಲಂಘಿಸಿ ಮತದಾನ ಮಾಡಿದ ನಗರಸಭಾ ಸದಸ್ಯರನ್ನು ಸದಸ್ಯತ್ವನ್ನು ಅನರ್ಹಗೊಳಿಸಲು ಹೋರಾಟವನ್ನು ಮುಂದುವರೆಸಲಾಗುತ್ತದೆ ಎಂದ ಅವರು ಹೊಸಹುಡ್ಯ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳಿಗೆ ಪರಿಹರಿಸುವ ಬದಲಿಗೆ ಸಚಿವ ಡಾ.ಕೆ.ಸುಧಾಕರ್ ಅವರು ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮವಾಗಿ ಪರಿವರ್ತಿಸಿಕೊಂಡು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಹಾಡುಗಳನ್ನು ಹಾಡಿ ಭಜನೆ ಮಾಡಿದ್ದಾರೆ ಅದು ಹೊರತುಪಡಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಕಲ್ಪಿಸುವ ಕೆಲಸ ಆಗಿಲ್ಲ ಎಂದು ದೂರಿದರು.
Advertisement
ಈ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವಕೀಲ ನಾರಾಯಣಸ್ವಾಮಿ, ಚಂದ್ರಶೇಖರ್,ರಘು,ರಾಮರೆಡ್ಡಿರವರು,ಮುನಿವೆಂಕಟಸ್ವಾಮಿ,ಗಂಗಾಧರ್,ಮತ್ತಿತರರು ಉಪಸ್ಥಿತರಿದ್ದರು.