ನಿರ್ದೇಶಕ ಸುನಿ ಸದ್ಯ “ಒಂದು ಸರಳ ಪ್ರೇಮಕಥೆ’ ಸಿನಿಮಾದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಈಗಾಗಲೇ ಸದ್ದಿಲ್ಲದೆ ತಮ್ಮ “ಒಂದು ಸರಳ ಪ್ರೇಮಕಥೆ’ಯ ಅರ್ಧದಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ಸುನಿ, ಕಳೆದ ಕೆಲ ದಿನಗಳಿಂದ ಮೈಸೂರು ಸುತ್ತಮುತ್ತ ತಮ್ಮ ತಂಡದೊಂದಿಗೆ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾರೆ. ನಾಯಕ ನಟ ವಿನಯ ರಾಜಕುಮಾರ್, ನಾಯಕಿಯರಾದ ಸ್ವಾತಿಷ್ಠ ಮತ್ತು ಮಲ್ಲಿಕಾ ಸಿಂಗ್ ಸೇರಿದಂತೆ ಹಲವು ಕಲಾವಿದರು ಈ ವೇಳೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಇದೇ ವೇಳೆ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳನ್ನು ಆಹ್ವಾನಿಸಿದ್ದ ಚಿತ್ರತಂಡ, “ಒಂದು ಸರಳ ಪ್ರೇಮಕಥೆ’ಯ ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.
ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, “”ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ “ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜಕುಮಾರ್ ಓ.ಕೆ ಮಾಡಿದ್ರು, ಚಿತ್ರಕ್ಕೆ ಎಂ. ಎಲ್ ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣವಾಗಿದೆ. ಎರಡನೇ ಸರಳ ಪ್ರೇಮಕಥೆಯಲ್ಲಿ ಸಿಂಪಲ್ ಸುನಿ ವಿನಯ್ ಕನಸು ಏಪ್ರಿಲ್‌ನಲ್ಲಿ ತೆರೆಗೆ ಹಂತದಲ್ಲಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ’ ಎಂದು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.
ನಟ ವಿನಯ್ ರಾಜಕುಮಾರ್ ಮಾತನಾಡಿ, “ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳೆಂದರೆ ಇಷ್ಟ. ಸುನಿ ನಿರ್ದೇಶನದ ಹಿಂದಿನ ಸಿನಿಮಾಗಳೂ ಕೂಡ ತುಂಬಾ ಇಷ್ಟವಾಗಿದ್ದವು. ಸುನಿ ಹೇಳಿದ ಕಥೆ ಇಷ್ಟವಾಗಿ ಈ ಸಿನಿಮಾ ಮಾಡುತ್ತಿದ್ದೇನೆ. ಈ ಸಿನಿಮಾದಲ್ಲಿ ನಾನು ಅತಿಶಯ್ ಎಂಬ ಪಾತ್ರದಲ್ಲಿ
Related Articles
ಅಭಿನಯಿಸುತ್ತಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿ ಕೊಟ್ಟರು. ವಿನಯ್ ರಾಜಕುಮಾರ್ ಮೂಲಕ ತೆರೆಗೆ ತರುತ್ತಿದ್ದಾರೆ’ ಎಂಬ ಮಾಹಿತಿ ನೀಡಿದರು ಬರಹಗಾರ ಎಂ. ಎಲ್ ಪ್ರಸನ್ನ.
“ಸಿನಿಮಾ ಒಂದು ಸರಳ ಪ್ರೇಮಕಥೆ’ ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, “ರಾಧಾಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಇಬ್ಬರೂ ನಟಿಯರಿಗೂ ಇದು ಮೊದಲ ಸಿನಿಮಾವಾಗಿದ್ದು, ಇಬ್ಬರೂ ಕೂಡ ತಮ್ಮ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದರು. ನಿರ್ಮಾಪಕ ಮೈಸೂರು ರಮೇಶ್, ಛಾಯಾಗ್ರಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮೊದಲಾದವರು ಸಿನಿಮಾದ ಬಗ್ಗೆ ಮಾತನಾಡಿದರು.