Advertisement

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಸಿಎಂ ಗೆ ಮನವಿ ; ವಿನಯ್ ಗುರೂಜಿ

12:41 PM Aug 26, 2020 | sudhir |

ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಮನವಿ ಮಾಡಲಾಗಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

Advertisement

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬುಧವಾರ ಭೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು, ಕೆಲವೆಡೆ ಪ್ರಾಣಿಗಳ ಹತ್ಯೆ ನಡೆಯುತ್ತಿದೆ. ಅದಕ್ಕಾಗಿ ಈಗ ಗೋಹತ್ಯೆ ನಿಷೇಧ ಅನಿವಾರ್ಯ. ಈ ಸಂಬಂಧ ನಾನು ನೀಡಿದ ಸಲಹೆಗಳನ್ನು ಮುಖ್ಯಮಂತ್ರಿಗಳು ಈವರೆಗೆ ನಿರಾಕರಿಸಿಲ್ಲ. ಈ ಸಲಹೆಯನ್ನೂ ಅವರು ಗಂಭೀರವಾಗಿ ಪರಿಗಣಿಸುತ್ತಾರೆ. ಈ ಬಗ್ಗೆ ಶೀಘ್ರದಲ್ಲೇ ಸಭೆ ಕರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ವಿನಯ್ ಗುರೂಜಿ ತಿಂದು ಉಳಿದ ಅನ್ನವನ್ನು ಪ್ರಸಾದ ರೂಪದಲ್ಲಿ ಹಂಚುತ್ತಾರೆ ಎಂಬ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರವರ ಭಾವ ಅವರವರದ್ದು. ಅವರು ಹೇಳಿದ ಸನ್ನಿವೇಶ ಅಲ್ಲಿರಲಿಲ್ಲ.

ನಾನೇ ನಿಶ್ಚಯ ಮಾಡಿದ ಮದುವೆ ಅದು. ನಾನು ಊಟ ಮಾಡಿದ ಮೇಲೆ ತಟ್ಟೆ ಎಲ್ಲಿಟ್ಟಿದೀನಿ, ಲೋಟ ಎಲ್ಲಿಟ್ಟಿದೀನಿ ಎಂದು ನೋಡುವುದಕ್ಕೆ ಆಗುವುದಿಲ್ಲ. ಅದು ನನ್ನ ಗಮನಕ್ಕೆ ಬರದೇ ನಡೆದಿರುವ ಪ್ರಸಂಗ. ಅದು ನನ್ನ ಗಮನಕ್ಕೆ ಬಂದಿದ್ದರೆ ಗಾಂಧಿವಾದದಂತೆ ನಾನು ಖಂಡಿಸುತ್ತಿದ್ದೆ. ಲಿಂಗಾಯಿತರಲ್ಲಿ ಒಂದು ಸಂಪ್ರದಾಯ‌ ಇದೆ. ನಾನು ಊಟ ಮಾಡಿದ ಮೇಲೆ ಪ್ರಸಾದವನ್ನು ತೆಗೆದುಕೊಂಡು ಹೋಗುತ್ತಾರೆ ಎಂದು‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next