ಬೆಂಗಳೂರು : ರಾಜ್ಯದಲ್ಲಿ ಅಸ್ಪೃಶ್ಯತೆ ಹೊಡೆದೋಡಿಸಲು ವಿನಯ ಸಾಮರಸ್ಯ ಯೋಜನೆ ಜಾರಿಗೆ ತರಲಾಗಿದ್ದು, 6020 ಗ್ರಾಮ ಪಂಚಾಯತಿಗಳಲ್ಲಿರುವ ಸಾಮಾಜಿಕ ನ್ಯಾಯ ಸಮಿತಿ ಮೂಲಕ ಅಸ್ಪೃಶ್ಯತೆ ಹೋಗಲಾಡಿಸಲು ಜಾಗೃತಿ ಮೂಡಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಅಂಬೇಡ್ಕರ್ ಸ್ಪೂರ್ತಿ ಭವನ ಸ್ಥಾಪನೆ ಅಗಬೇಕು ಅಂತ ರಾಜ್ಯದ ಜನರ ಬೇಡಿಕೆ ಇತ್ತು. ಇವತ್ತು ಸಿಎಂ ಸ್ಪೂರ್ತಿ ಭವನಕ್ಕೆ ಶಿಲಾನ್ಯಾಸ ಮಾಡಿದ್ದಾರೆ. 50 ಕೋಟಿ ರೂ. ಮೀಸಲಿಟ್ಟಿದ್ದಾರೆ.ಸಮಾಜದ ನಿಸ್ವಾರ್ಥ ಸೇವೆ ಸಲ್ಲಿಸಿದ ಐವರು ಮಹನೀಯರನ್ನು ಸನ್ಮಾನಿಸಲಾಯಿತು.ಎಸ್ಸಿ, ಎಸ್ಟಿ ಸಮುದಾಯವರಿಗೆ 75 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದರು.
ಕ್ರೈಸ್ಟ್ 805 ಶಾಲೆಗಳಿವೆ ಈ ಶಾಲೆಗಳಲ್ಲಿ ಓಬವ್ವ ಆತ್ಮರಕ್ಷಣೆಗಾಗಿ ತರಬೇತಿ ನೀಡಲಾಗುತ್ತಿದೆ. ಈ ಬಾರಿ 19000 ಕೊಳವೆ ಬಾವಿ ತೆರೆಯಲು ತೀರ್ಮಾನಿಸಿದ್ದು ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವಂತ ನಿಗಮಗಳ ಸಭೆ ಕರೆದು ಅನುದಾನ ಬಿಡುಗಡೆ ಹಾಗೂ ಬಳಕೆ ಮಾಡಲು ತೀರ್ಮಾನಿಸಲಾಗಿದೆ. ವಿನಯ ಸಾಮರಸ್ಯ ಯೋಜನೆ ಮೂಲಕ ಎಲ್ಲ ಸಮುದಾಯಗಳ ಸ್ವಾಮೀಜಿಗಳು ಜನ ಪ್ರತಿನಿಧಿಗಳು ಇದರಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಲಾಗುವುದು. ಅಸ್ಪಶ್ಯತೆ ನಿವಾರಣೆ ಮಾಡುವ ಪಂಚಾಯತಿ ಗೆ ವಿಶೇಷ ಅನುದಾನ ಹಾಗೂ ಪ್ರಶಸ್ತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.
ಸಂತೋಷ್ ಆತ್ಮಹತ್ಯೆ ಪ್ರಕರಣದ ಕುರಿತು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ಸಿಎಂ ವರದಿ ಬಂದ ನಂತರ ಪಕ್ಷ ತೀರ್ಮಾನ ಮಾಡಲಿದೆ ಎಂದರು.