ನಟ ವಿನಾಯಕ ಜೋಶಿ ತಮ್ಮದೇ ಆದ ಜೋಶಿ ಚಿತ್ರ ಲಾಂಛನದಲ್ಲಿ “ಮೀಟರ್ ಹಾಕಿ ಪ್ಲೀಸ್’ ಎಂಬ ವೆಬ್ ಸೀರಿಸ್ ನಿರ್ಮಾಣ ಮಾಡಿದ್ದಾರೆ. ನಿರ್ದೇಶನ ಹಾಗೂ ನಿರೂಪಣೆ ಕೂಡ ಅವರದೇ. ಇತ್ತೀಚೆಗೆ ಈ ವೆಬ್ ಸಿರೀಸ್‌ನ ಟ್ರೇಲರ್ ಬಿಡುಗಡೆ ಹಾಗೂ ಮೊದಲ ಸಂಚಿಕೆ ಪ್ರದರ್ಶನ ನಡೆಯಿತು.
Advertisement
“ಆಟೋ ಚಾಲಕರ ಜೀವನ ಹಾಗೂ ಸಾಧನೆಯನ್ನು ಪರಿಚಯಿಸುವ ವೆಬ್ ಸೀರಿಸ್ ಇದಾಗಿದೆ. ಸುಮಾರು ಏಳು ಕಂತುಗಳಲ್ಲಿ ಯೂಟ್ಯೂಬ್ ಇದು ಪ್ರಸಾರವಾಗಲಿದೆ. ಕರ್ನಾಟಕದಾದ್ಯಂತ ಇರುವ ಹತ್ತಕ್ಕೂ ಹೆಚ್ಚು ಜನಪ್ರಿಯ ಆಟೋಚಾಲಕರನ್ನು ಸಂದರ್ಶಿಸಿದ್ದೇನೆ. 40 ನಿಮಿಷಗಳ ಕಾಲ ಈ ಕಾರ್ಯಕ್ರಮ ಪ್ರಸಾರವಾಗಲಿದೆ’ ಎನ್ನುತ್ತಾರೆ ಜೋಶಿ.