ಮಂಗಳೂರು : ನಗರದ ಕಾರ್ ಸ್ಟ್ರೀಟ್ ನ ಅಪಾರ್ಟ್ ಮೆಂಟ್ ಒಂದರಲ್ಲಿ ಬುಧವಾರ ತಡ ರಾತ್ರಿ ನಡೆದ ವಿನಾಯಕ ಕಾಮತ್ ಎನ್ನುವವರ ಕೊಲೆ ಪ್ರಕರಣದ ಆರೋಪಿಗಳಾದ ಕೃಷ್ಣಾನಂದ ಕಿಣಿ ಮತ್ತು ಆವಿನಾಶ್ ಕಿಣಿ ಅವರನ್ನು ಮಂಗಳೂರು ಉತ್ತರ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪೂರ್ವ ದ್ವೇಷದ ಹಿನ್ನಲೆಯಿಂದ ವಿನಾಯಕ ಕಾಮತ್ ಅವರ ಎದೆಗೆ ಅಪಾರ್ಟ್ ಮೆಂಟ್ ನ ಪಾರ್ಕಿಂಗ್ ಸ್ಥಳದಲ್ಲಿ ಇರಿಯಲಾಗಿತ್ತು, ಈ ಕುರಿತು ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.
ಗಂಭೀರವಾಗಿ ಗಾಯಗೊಂದು ಕುಸಿದು ಬಿದ್ದಿದ್ದ ವಿನಾಯಕ ಕಾಮತ್ ಅವರನ್ನು ಅಪಾರ್ಟ್ ಮೆಂಟ್ ನಿವಾಸಿಗಳು ಯೆನಪೋಯ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ವಿನಾಯಕ್ ಕಾಮತ್ ಅವರು ಟೂರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.
ಘಟನೆಯ ದ್ರಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.