Advertisement

Fighter ಅನ್ಯಾಯದ ವಿರುದ್ಧ ಫೈಟ್‌: ಟೀಸರ್‌ ಬಂತು

12:19 PM Sep 01, 2023 | Team Udayavani |

ವಿನೋದ್‌ ಪ್ರಭಾಕರ್‌ ನಾಯಕರಾಗಿರುವ “ಫೈಟರ್‌’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಯಿತು. ನೂತನ್‌ ಉಮೇಶ್‌ ನಿರ್ದೇಶನದ ಈ ಚಿತ್ರವನ್ನು ಸೋಮಶೇಖರ್‌ ಕಟ್ಟಿಗೇನಹಳ್ಳಿ ನಿರ್ಮಿಸಿದ್ದಾರೆ. ನಿರ್ಮಾಪಕ ಸೋಮಶೇಖರ್‌ ಅವರ ತಂದೆ ಕೃಷ್ಣಪ್ಪ ಟೀಸರ್‌ ಬಿಡುಗಡೆ ಮಾಡಿದರು.

Advertisement

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ನೂತನ್‌ ಉಮೇಶ್‌, “ಸದ್ಯದಲ್ಲೇ ಹಾಡುಗಳು ಹಾಗೂ ಟ್ರೇಲರ್‌ ಹೊರಬರಲಿದೆ. ಅಕ್ಟೋಬರ್‌ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ. ಫೈಟರ್‌ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ಫೈಟರ್‌ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು. ಈ ಚಿತ್ರದಲ್ಲಿ  ವಿನೋದ್‌ ಪ್ರಭಾಕರ್‌ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್‌ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್‌ ಸಂಗೀತ ನೀಡಿದ್ದಾರೆ. ಪಾವನ ಹಾಗೂ ಲೇಖಾಚಂದ್ರ ನಾಯಕಿಯರಾಗಿ ನಟಿಸಿದ್ದಾರೆ . ಸುಮಾರು ವರ್ಷಗಳ ನಂತರ ನಟಿ ನಿರೋಷ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ’ ಎಂದರು.

ನಾಯಕ ವಿನೋದ್‌ ಪ್ರಭಾಕರ್‌ ಕೂಡಾ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. “ಫೈಟರ್‌ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್‌ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್‌’ ಎನ್ನುವುದು ವಿನೋದ್‌ ಪ್ರಭಾಕರ್‌ ಮಾತು.

ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಗುರುಕಿರಣ್‌ ಸಂಗೀತ, ಥ್ರಿಲ್ಲರ್‌ ಮಂಜು ಸಾಹಸವಿದೆ.

Advertisement

Udayavani is now on Telegram. Click here to join our channel and stay updated with the latest news.

Next