ಬೆಳಗಾವಿ: ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ(36) ಕೋವಿಡ್ ದಿಂದಾಗಿ ಬುಧವಾರ ಬೆಳಗಿನ ಜಾವ ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.
ಯುವ ಮುಖಂಡ ವಿನೋದ ಸವದಿ ಅವರು ಕಳೆದ ಬಾರಿ ಲಾಕ್ ಡೌನ್ ವೇಳೆ ವಿನೋದ್ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದರು.
ಇದನ್ನೂ ಓದಿ : ಸಿಎಸ್ ಕೆ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಂತಾಪ: ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಯುವ ಮುಖಂಡ ವಿನೋದ ಸವದಿ ಅವರ ನಿಧನದಿಂದ ತಮಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.