Advertisement

ಮರಾಠ ಮೀಸಲಾತಿಯನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

11:38 AM May 05, 2021 | Team Udayavani |

ನವದೆಹಲಿ : ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲಾಗುತ್ತಿದ್ದ ಮಹಾರಾಷ್ಟ್ರ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಈ ರೀತಿಯ ಕಾನೂನು ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಮರಾಠ ಮೀಸಲಾತಿಯನ್ನು ರದ್ದು ಮಾಡಿದೆ.

Advertisement

ಮರಾಠ ಸಮುದಾಯವನ್ನು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗ (ಇಎಸ್‌ಬಿಸಿ) ಎಂದು ಘೋಷಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಮರಾಠ ಕೋಟಾದ ಅಡಿಯಲ್ಲಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ಕಾರಣ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. 2018 ರ ಮಹಾರಾಷ್ಟ್ರ ಕಾನೂನು ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next