Advertisement

ಪಾಕ್ ಕದನ ವಿರಾಮ ಉಲ್ಲಂಘನೆ: ಓರ್ವ ಯೋಧ ಹುತಾತ್ಮ

09:32 AM Nov 09, 2019 | Team Udayavani |

ಶ್ರೀನಗರ: ಗಡಿಯಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಪಾಕಿಸ್ಥಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

Advertisement

ಜಮ್ಮು ಕಾಶ್ಮೀರದ ಗಡಿಯ ಲೈನ್ ಆಫ್ ಕಂಟ್ರೋಲ್ ನ ಪೂಂಛ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ.

ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧರು ತಿರುಗೇಟು ನೀಡಿದ್ದು, ಮರು ಗುಂಡಿನ ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next