Advertisement

ನೀತಿ ಸಂಹಿತೆ ಉಲ್ಲಂಘನೆ: ಸಿಎಂ ವಿರುದ್ಧ ದೂರು

11:09 PM Sep 22, 2019 | Lakshmi GovindaRaju |

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಿಎಂ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ ಹಾಗೂ ಇತರರ ವಿರುದ್ಧ ಕಾಂಗ್ರೆಸ್‌ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

Advertisement

ಮಾಜಿ ಸಂಸದ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್‌. ಉಗ್ರಪ್ಪ ನೇತೃತ್ವದ ನಿಯೋಗ ಭಾನುವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿ, ತಕ್ಷಣ ದಿಂದಲೇ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಸಿಎಂ ಯಡಿಯೂರಪ್ಪ, ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಸರ್ಕಾರಿ ಅತಿಥಿ ಗೃಹದಲ್ಲಿ ಅನರ್ಹ ಶಾಸಕರ ಜತೆಗೆ ಸಭೆ ನಡೆಸಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿಗಳು ಇತರ ಸಚಿವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾರೊಂದಿಗೆ ವಿಡಿಯೋ ಕಾನ್‌ರೆನ್ಸ್‌ ನಡೆಸಿ, ಉಪಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿದ್ದಾರೆ. ಈ ರೀತಿ ಆಡಳಿತ ಯಂತ್ರ ದುರುಪಯೋಗಿ ಪಡಿಸಿಕೊಂಡು ಚುನಾವಣೆ ನೀತಿ ಸಂಹಿತೆ ಉಲ್ಲಂ ಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಸಚಿವರು ಹಾಗೂ ಇತರರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next