Advertisement

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

02:55 PM Mar 20, 2024 | Team Udayavani |

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು.

Advertisement

ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು ೫೦೦ ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು.

ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಅಲ್ಲಿಂದ ಕಳಿಸಿದರು.

ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: BC Road: ಅನಾರೋಗ್ಯ; ಚಿಕಿತ್ಸೆ ಫಲಕಾರಿಯಾಗದೇ 2ನೇ ತರಗತಿ ವಿದ್ಯಾರ್ಥಿನಿ ನಿಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next