Advertisement

Election ನೀತಿ ಸಂಹಿತೆ ಉಲ್ಲಂಘನೆ;ಸಾಗರ Congress ಪ್ರಮುಖನ ವಿರುದ್ಧ ದೂರು ದಾಖಲು

10:32 PM Apr 07, 2023 | Team Udayavani |

ಸಾಗರ: ಮಾ. 30 ರಂದು ನಗರದಲ್ಲಿ ಕಾಂಗ್ರೆಸ್ ಪಕ್ಷದವರು ನಡೆಸಿದ್ದ ಕಾರ‍್ಯಕರ್ತರ ಸಭೆಯಲ್ಲಿ ಅನುಮತಿ ಇಲ್ಲದೆ ಒಂದೂವರೆ ಸಾವಿರಕ್ಕೂ ಹೆಚ್ಚು ಜನರಿಗೆ ಊಟ ವಿತರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಬಲೇಶ್ವರ ಕೌತಿಯವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Advertisement

ಕಳೆದ ಮಾರ್ಚ್ 30 ರಂದು ಸಾಗರದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಕಾಗೋಡು ತಿಮ್ಮಪ್ಪ, ಬೇಳೂರು ಗೋಪಾಲಕೃಷ್ಣ, ಬಿ.ಆರ್. ಜಯಂತ್ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಕುರಿತಂತೆ ಕೌತಿಯವರ ಅರ್ಜಿಗೆ ಸಾಗರ ಉಪ ವಿಭಾಗದ ಸಹಾಯ ಆಯುಕ್ತರು ಷರತ್ತುಬದ್ಧ ಅನುಮತಿಯನ್ನು ನೀಡಿದ್ದರು.

ಕಾರ್ಯಕ್ರಮ ನಡೆಯುವಾಗ ಎಎಸ್‌ಟಿ ತಂಡದ ಅಧಿಕಾರಿಗಳು ಭೇಟಿ ನೀಡಿ, ವೀಕ್ಷಣೆ ನಡೆಸಿದಾಗ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. ಸಭೆಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾಕಾರಿ ಪಲ್ಲವಿ ಸಾತೇನಹಳ್ಳಿಯವರು ನೋಟಿಸ್ ನೀಡಿದ್ದರು. ಇದಕ್ಕೆ ಕೌತಿಯವರು ನೀಡಿದ್ದ ಮಾಹಿತಿ ಸಮಂಜಸವಾಗಿಲ್ಲದ ಕಾರಣ ನಗರಸಭಾ ಪೌರಾಯುಕ್ತರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಂಸಿಸಿ ನೋಡಲ್ ಅಧಿಕಾರಿ ದೂರು ನೀಡಿದ್ದು, ಕೌತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next