Advertisement

ಆಹಾರ ಸುರಕ್ಷತೆ ಕಾಯ್ದೆ ಉಲ್ಲಂಘನೆ ಶಿಕ್ಷಾರ್ಹ ಅಪರಾಧ

01:07 PM Feb 25, 2018 | Team Udayavani |

ಬೀದರ: ಆಹಾರ ಸುರಕ್ಷತೆ ಕಾಯ್ದೆಯನ್ನು ಉಲ್ಲಂಘಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಾರಾಟಗಾರರು ನಿಯಮಗಳನ್ನು ಕಡ್ಡಾಯ ಪಾಲಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಎಚ್‌. ಬಸವರಾಜು ಹೇಳಿದರು.

Advertisement

ಬೀದರ ಗ್ರಾಹಕರ ಮಾಹಿತಿ ಕೇಂದ್ರದಡಿ ಬಂಜಾರಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ನಗರದ ರಂಗಮಂದಿರದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಗ್ರಾಹಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಹಾರ ಉತ್ಪನ್ನಗಳ ತಯಾರಕರು ಮತ್ತು ಮಾರಾಟಗಾರರು ಆಹಾರ ಸುರಕ್ಷತೆಯ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇಲ್ಲವಾದಲ್ಲಿ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು. 

ಶಿವಮೊಗ್ಗ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ ಮಾತನಾಡಿ, ಯುವ ಜನಾಂಗ ಆನ್‌ಲೈನ್‌ ಮಾರುಕಟ್ಟೆಯತ್ತ ಹೆಚ್ಚು ಆಸಕ್ತಿ ತೋರಿಸುತ್ತಿದೆ. ಇತ್ತೀಚೆಗೆ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಆನ್‌ಲೈನ್‌ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಗ್ರಾಹಕರು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. 

ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ| ರವಿಂದ್ರನಾಥ ಶಾನಭಾಗ್‌ ಮಾತನಾಡಿ, ಜೀವವಿಮೆ, ಪಿಂಚಣಿ ಯೋಜನೆ, ಪರಿಸರ ಮಾಲಿನ್ಯ ಮತ್ತು ವೈದ್ಯಕೀಯ ನಿರ್ಲಕ್ಷéತನದ ಕುರಿತು ವಿವರಣೆ ನೀಡಿದರು. ಧಾರವಾಡದ ವಕೀಲ ಬಸವ ಪ್ರಭುಹೊಸಕೇರಿ ಮಾತನಾಡಿದರು.
 
ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಧೇನುನಾಯಕ ಚವ್ಹಾಣ, ಆಹಾರ ಇಲಾಖೆ ವ್ಯವಸ್ಥಾಪಕ ಶಿವರಾಜ ಕುದುರೆ, ಆಹಾರ ಸಂರಕ್ಷಣಾಧಿಕಾರಿ ಶಿವಶಂಕರ್‌ ಬಿ., ಕಾನೂನು ಮಾಪನ ಶಾಸ್ತ್ರ ಇಲಾಖೆಯ ರಾಜು ಸೂರ್ಯನ್‌, ಬಿಸಿಯೂಟ ಅಧಿಕಾರಿ ವಿಭೂತಿ, ಪ್ರಾಥಮಿಕ ಶಾಲೆಗಳ ಅಡುಗೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು. ಬಸವರಾಜ ಪವಾರ್‌ ಸ್ವಾಗತಿಸಿದರು. ಗೋಪಾಲಸಿಂಗ್‌ ರಾಠೊಡ್‌  ರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next