Advertisement

Bengaluru: ರಸ್ತೆ ಸಂಚಾರ ನಿಯಮ ಉಲ್ಲಂಘನೆ; ವಾಹನಗಳ ವಿರುದ್ಧ  1100 ಪ್ರಕರಣ

11:16 AM Aug 01, 2024 | Team Udayavani |

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ವಾಹನ ಸವಾರರು ಮತ್ತು ಚಾಲಕರ ವಿರುದ್ಧ 1100 ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಿಸಿರುವ ಪೂರ್ವ ವಿಭಾಗದ ಸಂಚಾರ ಪೊಲೀಸರು 5.61 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ‌

Advertisement

ಟ್ರಾಫಿಕ್‌ ಸಿಗ್ನಲ್ ಜಂಪ್‌, ರಾಂಗ್‌ ಪಾರ್ಕಿಂಗ್‌, ಏಕಮುಖ ಸಂಚಾರವಿ ದ್ದರೂ ವಿರುದ್ಧ ದಿಕ್ಕಿನಲ್ಲಿ ಸಂಚಾರ, ಫ‌ುಟ್‌ಪಾತ್‌ ಪಾರ್ಕಿಂಗ್‌, ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಿದ ಆಟೋ, ಸೀಟ್‌ ಬೆಲ್ಟ್ ಹಾಕದಿರುವುದು, ಅಗತ್ಯಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಬಸ್‌ನಲ್ಲಿ ಕರೆದೊಯ್ಯುವುದು, ಸವಾರ ಹಿಂಬದಿ ಸವಾರ ಹೆಲ್ಮೆಟ್‌ ಧರಿಸದಿರುವುದು ಸೇರಿ ವಿವಿಧ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರು ಮತ್ತು ಚಾಲುಕರು ಗಳ ವಿರುದ್ಧ ಮಂಗಳವಾರ ವಿಶೇಷ ಕಾರ್ಯಾಚರಣೆ ಕೈಗೊಳ್ಳ ಲಾಗಿತ್ತು. ಇದೇ ವೇಳೆ ಸಂಚಾರ ನಿಯಮಗಳನ್ನು ಉಲ್ಲಂ  ಸದೆ ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಸಂಚಾರ ಉಪ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next