Advertisement
ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಸೇರಿ ಕೋವಿಡ್ -19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿ ಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಲೆಟ್ಟ್ ಕಿಟ್ ಫೌಂಡೇಶನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ನ.24ಕ್ಕೆ ಮುಂದೂಡಿತು. ಅರ್ಜಿಯ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳು ಹಾಗೂ ರಾಜಕೀಯ ನಾಯಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಕ್ರಮ ಜರುಗಿಸುವ ಹಾಗೂ ಎಫ್‌ಐಆರ್ ದಾಖಲಿಸುವಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದರೆ, ರಾಜ್ಯ ಸರ್ಕಾರ ಈವರೆಗೆ ಯಾವುದೇ ಕಠಿಣ ಕ್ರಮ ಜರುಗಿಸಿಲ್ಲ.
Related Articles
Advertisement
ಯಾರಿಗೂ ವಿನಾಯ್ತಿ ನೀಡುತ್ತಿಲ್ಲ: ಸರ್ಕಾರಿ ವಕೀಲರು, ಕಾನೂನಿನಿಂದ ಯಾರಿಗೂ ವಿನಾಯ್ತಿ ನೀಡುತ್ತಿಲ್ಲ. ಮಾರ್ಗಸೂಚಿ ಉಲ್ಲಂಘಿಸಿದ ಎಲ್ಲರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ತಿಳಿಸಿದರು.
ಕಾನೂನು ಪ್ರಕಾರ ಕ್ರಮ ಜರುಗಿಸಿಲ್ಲ: ನ್ಯಾಯ ಪೀಠ ಪ್ರತಿಕ್ರಿಯಿಸಿ, ತೇಜಸ್ವಿ ಸೂರ್ಯ ಅವರ ರ್ಯಾಲಿ ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದೆ. ಆದರೆ, ಈವರೆಗೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಿಲ್ಲ. ನಂತರ ರಾಜಕೀಯ ಪಕ್ಷಗಳ ರ್ಯಾಲಿಗಳಲ್ಲಿ ಕೋವಿಡ್-19 ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂ ಸಲಾಗುತ್ತಿದೆ. ಆದರೂ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸುವಲ್ಲಿ ಸರ್ಕಾರ ವಿಫಲವಾಗಿದೆ.
ಸರ್ಕಾರ ರಾಜಕೀಯ ಪಕ್ಷಗಳ ಮೇಲೆ ನಿಯಂತ್ರಣ ಹೊಂದಿಲ್ಲ. ಆದ್ದರಿಂದ ರಾಜ್ಯದಲ್ಲಿಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳ ಪಟ್ಟಿಯಲ್ಲಿ ಸೇರಿಸಿ, ಅವುಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ನೀಡಿ ವಿವರಣೆ ಪಡೆಯಲಾಗುವುದು. ಅದಕ್ಕಾಗಿ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅರ್ಜಿದಾರ ವಕೀಲ ಪುತ್ತಿಗೆ ರಮೇಶ್ ಅವರಿಗೆ ನ್ಯಾಯಪೀಠ ಸೂಚಿಸಿತು.