Advertisement

ಸಂಚಾರ ನಿಯಮ ಉಲ್ಲಂಘನೆ: ಶೇ. 50ರ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ

12:23 AM Aug 10, 2023 | Team Udayavani |

ಮಡಿಕೇರಿ: ಸಾರಿಗೆ ಮತ್ತು ರಸ್ತೆ ಸುರಕ್ಷೆ ಆಯುಕ್ತಾಲಯದ ಮನವಿಯಂತೆ ಉಚ್ಚನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್‌ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಈ ರಿಯಾಯಿತಿಯು ಸೆ. 9ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next