Advertisement
ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿನಡೆದ ತ್ತೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳನ್ನು ವಿಳಂಬ ಮಾಡದೇ ñರಿತ್ವ ಗತಿಯಲ್ಲಿ ಇತ್ಯರ್ಥಪಡಿಸಬೇಕು. ಸಂತ್ರಸ್ಥರಿಗೆ ಸಕಾಲದಲ್ಲಿ ಪರಿಹಾರ, ಪುನರ್ವಸತಿ ಸೇರಿದಂತೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ತಾಕೀತು ಮಾಡಿದರು. 16.75 ಲಕ್ಷ ರೂ. ಪರಿಹಾರ: 2021ನೇ ಸಾಲಿನಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆ 1989ರ ಅಡಿಯಲ್ಲಿ 2021ರ ಆಗಸ್ಟ್ 1ರಿಂದ ನವೆಂಬರ್ 30ರವರೆಗೆ ಒಟ್ಟು 26 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 16.75 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಸಭೆಗೆ ಮಾಹಿತಿ ನೀಡಿದರು.
Related Articles
Advertisement