Advertisement

ಅಂಬೇಡ್ಕರ್‌ ಭವನ ನಿರ್ಮಾಣ ಕಾರ್ಯ ಆರಂಭಿಸಲು ಸೂಚನೆ

05:39 PM Jul 04, 2018 | Team Udayavani |

ಬೆಳಗಾವಿ: ಖಾನಾಪುರ ಪಟ್ಟಣದಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಮೀಸಲಿಟ್ಟಿರುವ ಜಾಗವನ್ನು ದಲಿತ ಸಂಘಟನೆಯಿಂದ ಮರಳಿ ಪಡೆದು ತಕ್ಷಣ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕು ಎಂದು ಉಪ ವಿಭಾಗಾಧಿಕಾರಿ ಡಾ| ಕವಿತಾ ಯೋಗಪ್ಪನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್‌ಸಿ-ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಖಾನಾಪುರದಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆ ಆಗಿದೆ. ಆದರೆ ಜಾಗದ ಸಮಸ್ಯೆಯ ಕಾರಣ ಹೇಳಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.

ಜಿಲ್ಲಾ ಪಂಚಾಯತ್‌ ಸದಸ್ಯ ಜೀತೇಂದ್ರ ಮಾದರ ಮಾತನಾಡಿ, 10 ವರ್ಷಗಳ ಹಿಂದೆ ಖಾನಾಪುರದಲ್ಲಿ ಅಂಬೇಡ್ಕರ್‌ಭವನ ನಿರ್ಮಾಣಕ್ಕೆ 10 ಗುಂಟೆ ಜಾಗ ಖರೀದಿಸಲಾಗಿತ್ತು. ಇದಕ್ಕೆ ಸರ್ಕಾರ ಶೇ.80ರಷ್ಟು ಅನುದಾನ ನೀಡಿರುವ ಹಿನ್ನೆಲೆಯಲ್ಲಿ ಇದು ಸಾರ್ವಜನಿಕ ಆಸ್ತಿಯಾಗಿದೆ. ಆದರೆ ಈ ಜಾಗವನ್ನು ದಲಿತ ಸಂಘಟನೆ ಹೆಸರಿನಲ್ಲಿ ನೋಂದಣಿ ಮಾಡಿರುವುದರಿಂದ ಸಂಘಟನೆಯವರು ಅಂಬೇಡ್ಕರ ಭವನ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡುತ್ತಿಲ್ಲ . ಇದರಲ್ಲಿ ತಾಪಂ ಅಧಿಕಾರಿಗಳ ನಿರ್ಲಕ್ಷ್ಯ ಇದೆ ಎಂದು ಹೇಳಿದರು.

ದೌರ್ಜನ್ಯಕ್ಕೆ ಒಳಗಾದ ಎಸ್‌ಸಿ – ಎಸ್‌ಟಿ ಸಮುದಾಯದ ಜನರು ಪೊಲೀಸ್‌ ಠಾಣೆಗಳಿಗೆ ದೂರು ಸಲ್ಲಿಸಲು ಹೋದರೆ ಪೊಲೀಸರು ಹೆದರಿಸುತ್ತಿದ್ದಾರೆ. ಇದರಿಂದ ಎಸ್‌ಸಿ ಮತ್ತು ಎಸ್‌ಟಿ ದೌರ್ಜನ್ಯ ಪ್ರಕರಣಗಳು ಪರಿಹಾರ ಕಾಣುತ್ತಿಲ್ಲ ಎಂದು ಸದಸ್ಯರು ದೂರಿದರು. ಸಭೆಯಲ್ಲಿ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next