Advertisement

ದೆಹಲಿ ಹಿಂಸಾಚಾರ: ಮೃತರ ಸಂಖ್ಯೆ 34ಕ್ಕೆ ಏರಿಕೆ, ಶಾಂತಿ ಕಾಪಾಡಲು ಮನವಿ

09:28 AM Feb 28, 2020 | Mithun PG |

ದೆಹಲಿ: ನವದೆಹಲಿಯ ಈಶಾನ್ಯ ಭಾಗದಲ್ಲಿ ಸಿಎಎ ಮತ್ತು ಎನ್ ಆರ್ ಸಿ ಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ದೆಹಲಿ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ಈಗಾಗಲೇ ಮೃತರ ಸಂಖ್ಯೆ 34 ಕ್ಕೆ ಏರಿಕೆಯಾಗಿದ್ದು 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು ಹಲವೆಡೆ ಅಗ್ನಿಶಾಮಕದಳದ ನಿಯೋಜನೆ ಮಾಡಲಾಗಿದೆ.

Advertisement

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್  ಹಿಂಸಾಚಾರಕ್ಕೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕರು ಹಿಂಸಾಚಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜನತೆಗೆ ಶಾಂತಿಯಿಂದಿರುವಂತೆ ಕರೆ ನೀಡಿದ್ದಾರೆ. ಮಾತ್ರವಲ್ಲದೆ ದಿಲ್ಲಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಕೂಡ ಹಿಂಸಾಚಾರವನ್ನು ತಹಬಂದಿಗೆ ತರುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮತ್ತು ಸರಕಾರಗಳಿಗೆ ಸೂಚಿಸಿವೆ.

ಹೊಸದಾಗಿ ನೇಮಕಗೊಂಡ ಪೊಲೀಸ್ ವಿಶೇಷ ಆಯುಕ್ತ ( ಕಾನೂನು ಮತ್ತು ಸುವ್ಯವಸ್ಥೆ) ಎಸ್, ಎನ್ ಶ್ರೀವಾಸ್ತವ ಈಶಾನ್ಯ ದಿಲ್ಲಿಯಲ್ಲಿನ ಪರಿಸ್ಥಿತಿ ನಿಯಂತ್ರಿಸಲು ಸ್ವತಃ ಸ್ಥಳಕ್ಕೆ ತೆರಳಿದ್ದಾರೆ. ಜಪ್ರಬಾದ್, ಬಾಬರ್ ಪುರ್, ಗೋಕುಲ್ ಪುರಿ, ಶಿವ ವಿಹಾರ್ ಮೊದಲಾದ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಬುಧವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next