Advertisement

ಉತ್ತರ ಪ್ರದೇಶದಲ್ಲಿ ವೈರಲ್‌ ಫಿವರ್‌ ಭೀತಿ : ಜನರ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ

10:34 PM Aug 27, 2021 | Team Udayavani |

ಲಕ್ನೋ : ಕೊರೊನಾ ಸೋಂಕಿನ ಮೂರನೇ ಅಲೆಯ ಭೀತಿಯ ನಡುವೆಯೇ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ವೈರಲ್‌ ಫಿವರ್‌ನ ಆತಂಕ ಹೆಚ್ಚಾಗಿದೆ.

Advertisement

ಅಲ್ಲಿನ ಹಲವು ಜಿಲ್ಲೆಗಳಲ್ಲಿ ವೈರಲ್‌ ಫಿವರ್‌ ನಿಂದಾಗಿ ಸಾವಿಗೀಡಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.

ಮಥುರಾ, ಫಿರೋಜಾಬಾದ್‌, ಮೈನ್‌ ಪುರಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ದೃಢ ಪಡುತ್ತಿವೆ. ಈ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರ ಜಿಲ್ಲೆಯಲ್ಲಿ ಅಲರ್ಟ್‌ ಘೋಷಿಸಲಾಗಿದೆ.

ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಎಲ್ಲ ಸ್ಥಳಗಳ ಜನರ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ :ಕಾಮುಕರನ್ನ ಬಂಧಿಸುವ ಕಾನೂನು ಮತ್ತಷ್ಟು ಗಟ್ಟಿಯಾಬೇಕು : ನಟಿ ಶ್ರುತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next