ವೆಲ್ಲೂರು: ಗಣೇಶ ಚತುರ್ಥಿ ಆಚರಣೆ ವೇಳೆ ತಮಿಳುನಾಡಿನ ವೆಲ್ಲೂರು ಮೂಲದ ವ್ಯಕ್ತಿಯೊಬ್ಬ ಬುರ್ಖಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ, ಬಳಿಕ ಆತನನ್ನು ಬಂಧಿಸಲಾಗಿದೆ.
ಸೆಪ್ಟೆಂಬರ್ 21 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬುರ್ಖಾ ಧರಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ, ತನಿಖೆ ಪ್ರಾರಂಭಿಸಿ ತಂಡ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿಯನ್ನು ವಿರುತ್ತಂಪಟ್ಟು ಮೂಲದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಬುರ್ಖಾ ಧರಿಸಿ ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದಿದ್ದ.
ನಂತರ ಎರಡು ಗುಂಪುಗಳ ನಡುವೆ ದ್ವೇಷ ಉಂಟು ಮಾಡಲು ಯತ್ನಿಸಿದ ಅರುಣ್ ಕುಮಾರ್‌ನನ್ನು ಬಂಧಿಸಲಾಗಿತ್ತು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.