ಬೆಂಗಳೂರು: ತಮ್ಮನ್ನು ಮಾರ್ಫ್ ಮಾಡಿರುವ ನಕಲಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳು ಮಾಡಲು ಅದನ್ನು ನಿರ್ಮಿಸಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಈಗಾಗಲೇ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದೇನೆ. ಅಪರಾಧಿಗಳ ಶೀಘ್ರ ಬಂಧನವಾಗುವ ನಂಬಿಕೆ ಇದೆ. ಅಲ್ಲದೇ, ಈ ವಿಚಾರದಲ್ಲಿ ಕೋರ್ಟ್ ತಡೆಯಾಜ್ಞೆ ತಂದಿದ್ದು, ಈ ವಿಡಿಯೊವನ್ನು ಯಾರಾದರೂ ಫಾರ್ವರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ. ಈ ರೀತಿ ಮಾಡುವವರ ಬಗ್ಗೆ ಮಾಹಿತಿ ನೀಡುವಂತೆ ಸದಾನಂದಗೌಡ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಪಂಜಾಬ್ ನೂತನ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ವಿರುದ್ಧ ಮೀಟೂ ಆರೋಪ
ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.