ಲಕ್ನೋ: ಚಲಿಸುತ್ತಿರುವ ಸ್ಕೂಟಿಯಲ್ಲೇ ಜೋಡಿಯೊಂದು ರೊಮ್ಯಾನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದದಂತೆ ಕಾರ್ಯಪ್ರವೃತ್ತರಾದ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ.
ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದು ಯುಪಿ ಪೊಲೀಸರನ್ನು ತನಿಖೆಗೆ ಪ್ರೇರೇಪಿಸಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಹಜರತ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
“ಲಕ್ನೋದ ಹಜರತ್‌ಗಂಜ್ ಠಾಣಾ ವ್ಯಾಪ್ತಿಯಲ್ಲಿ ಯುವಕ ಮತ್ತು ಅಪ್ರಾಪ್ತ ವಯಸ್ಕ ಬಾಲಕಿ ಅನುಚಿತ ರೀತಿಯಲ್ಲಿ ಸ್ಕೂಟರ್‌ನಲ್ಲಿ ಕುಳಿತಿರುವುದನ್ನು ತೋರಿಸುವ ವಿಡಿಯೋ ಬೆಳಕಿಗೆ ಬಂದಿದೆ. ಐಪಿಸಿ ಸೆಕ್ಷನ್ 294, 279 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಚಾಲಕ ವಿಕ್ಕಿ ಶರ್ಮಾ(23) ಬಂಧಿತನಾಗಿದ್ದು, ಆತನ ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲಕ್ನೋ ಪೊಲೀಸರು ತಿಳಿಸಿರುವುದನ್ನು ಎಎನ್‌ಐ ಉಲ್ಲೇಖಿಸಿದೆ.