Advertisement

ಹೀಗಿರಬೇಕು ಮದುವೆ ಅಗ್ರಿಮೆಂಟ್‌! ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ!

09:13 AM Jul 12, 2022 | Team Udayavani |

ಮದುವೆಯಲ್ಲಿ ನವ ವಧು-ವರರು ಏಳೇಳು ಜನ್ಮಕ್ಕೂ ಜತೆಯಾಗಿರುವುದಾಗಿ ಪ್ರಮಾಣಿಸುವುದು ಸಾಮಾನ್ಯ. ಆದರೆ ಈ ಮದುವೆಯಲ್ಲಿ ನಡೆದ ಒಪ್ಪಂದ ಕೇಳಿದರೆ ನೀವು ನಗುವುದು ಗ್ಯಾರಂಟಿ.

Advertisement

“ತಿಂಗಳಿಗೊಂದೇ ಪಿಜ್ಜಾ ತರಿಸಬೇಕು’, “15 ದಿನಕ್ಕೊಮ್ಮೆ ಶಾಪಿಂಗ್‌ಗೆ ಕರೆದೊಯ್ಯಬೇಕು’, “ಮನೆ ಊಟಕ್ಕೆ ಯಾವಾಗಲೂ ಬೇಡ ಎನ್ನಕೂಡದು’, “ಪ್ರತಿದಿನ ಜಿಮ್‌ಗೆ ಹೋಗಬೇಕು’, “ಪ್ರತಿ ಪಾರ್ಟಿಯಲ್ಲಿ ಒಳ್ಳೊಳ್ಳೆ ಫೋಟೋ ತೆಗೆದುಕೊಡಬೇಕು’, “ಪ್ರತಿ ಭಾನುವಾರ ಗಂಡನೇ ತಿಂಡಿ ರೆಡಿ ಮಾಡಬೇಕು’.

ಇದು ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾದ ವರ-ವಧು ಸಹಿ ಹಾಕಿರುವ ಒಪ್ಪಂದದಲ್ಲಿರುವ ಅಂಶಗಳು. ಸ್ನೇಹಿತರಿಂದ ತಯಾರಾಗಿ ಅವರದ್ದೂ ಸಹಿ ಇರುವ ಈ ರೀತಿಯ ಒಪ್ಪಂದ ಪತ್ರಕ್ಕೆ ವರ ಮಿಂಟು ಮತ್ತು ವಧು ಶಾಂತಿ ಸಹಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next