Advertisement

ಐಸಿಸಿ ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಪ್ರಗತಿ

04:59 PM Jan 11, 2023 | Team Udayavani |

ಮುಂಬೈ: ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಮಾಸ್ಟರ್‌ಕ್ಲಾಸ್ ಪ್ರದರ್ಶಿಸಿದ ನಂತರ ಭಾರತದ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಐಸಿಸಿ ಏಕದಿನ ಪುರುಷರ ಶ್ರೇಯಾಂಕದಲ್ಲಿ ಉನ್ನತಿ ಪಡೆದಿದ್ದಾರೆ.

Advertisement

ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಗೆಲುವಿನಲ್ಲಿ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದು, ಎರಡು ಸ್ಥಾನ ಮೇಲೇರಿ 6ನೇ ಸ್ಥಾನಕ್ಕೆ ತಲುಪಿದ್ದಾರೆ. ಆಕ್ರಮಣಕಾರಿ 83 ರನ್ ಗಳಿಸಿದ ರೋಹಿತ್ ಶರ್ಮಾ 8ನೇ ಸ್ಥಾನ ಪಡೆದು ಕೊಂಡಿದ್ದಾರೆ. ಶ್ರೀಲಂಕಾ ತಂಡದ ನಾಯಕ ದಸುನ್ ಶನಕಾ ಅವರು ಶತಕ ಗಳಿಸಿದ್ದರು. ಹೀಗಾಗಿ 20 ಸ್ಥಾನ ಮೇಲೇರಿ 61 ಸ್ಥಾನಕ್ಕೆ ತಲುಪಿದ್ದಾರೆ.

ಬೌಲಿಂಗ್ ಪಟ್ಟಿಯಲ್ಲಿ, ಮೊಹಮ್ಮದ್ ಸಿರಾಜ್ ಅವರು ಮೊದಲ ಏಕದಿನ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸಿ ನಾಲ್ಕು ಸ್ಥಾನಗಳನ್ನು ಮೇಲೇರಿ 18 ಕ್ಕೆ ತಲುಪಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next