ಸೌಥಂಪ್ಟನ್: ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿದೆ. ಇದಕ್ಕಾಗಿ ತಯಾರಿ ನಡೆಸುತ್ತಿರುವ ಭಾರತ ತಂಡ ಸೌಥಂಪ್ಟನ್ ಕ್ರೀಡಾಂಗಣದಲ್ಲಿ ಅಭ್ಯಾಸ ಪಂದ್ಯ ಆಡುತ್ತಿದೆ. ಭಾರತ ಬಳಗವನ್ನು ಎರಡು ತಂಡಗಳನ್ನಾಗಿ ಮಾಡಿ ಪಂದ್ಯವಾಡಿಸಲಾಗುತ್ತಿದೆ.
ಇದನ್ನೂ ಓದಿ:ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಢಿಕ್ಕಿ ಹೊಡೆದ ಫಾಫ್ ಡು ಪ್ಲೆಸಿಸ್; ಆಸ್ಪತ್ರೆಗೆ ದೌಡು
ಬಿಸಿಸಿಐ ಈ ಪಂದ್ಯದ ಕೆಲವು ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಒಂದು ತಂಡಕ್ಕೆ ವಿರಾಟ್ ಕೊಹ್ಲಿ ನಾಯಕನಾದರೆ ಮತ್ತೊಂದು ತಂಡಕ್ಕೆ ಕೆ.ಎಲ್.ರಾಹುಲ್ ನಾಯಕನಾಗಿದ್ದಾರೆ. ಕೆ.ಎಲ್.ರಾಹುಲ್ ಬ್ಯಾಟಿಂಗ್ ಮಾಡುವ ವೇಳೆ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ಗಮನ ಸೆಳೆದರು.
ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಜೂ.18ರಿಂದ ಏಜಸ್ ಬೌಲ್ ಅಂಗಳದಲ್ಲಿ ಆರಂಭವಾಗಲಿದೆ. ಭಾರತ ತಂಡಕ್ಕೆ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲ್ಯಾಂಡ್ ತಂಡ ಎದುರಾಗಲಿದೆ.
ಸದ್ಯ ನ್ಯೂಜಿಲ್ಯಾಂಡ್ ತಂಡ ಇಂಗ್ಲೆಂಡ್ ವಿರುದ್ಧ ಸರಣಿ ಆಡುತ್ತಿದೆ. ಎರಡು ಪಂದ್ಯಗಳ ಸರಣಿಯ ಎರಡನೇ ಪಂದ್ಯ ಸದ್ಯ ನಡೆಯುತ್ತಿದೆ. ಕೇನ್ ವಿಲಿಯಮ್ಸನ್ ವಿಶ್ರಾಂತಿಯಲ್ಲಿದ್ದು, ಟಾಮ್ ಲ್ಯಾಂಥಮ್ ತಂಡವನ್ನು ಮುನ್ನಡೆಸಲಿದ್ದಾರೆ.