ಮುಂಬೈ: ಟೀಂ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ನೆರವಾಗಿದ್ದಾರೆ. ವಿರಾಟ್ ಮತ್ತು ಪತ್ನಿ ಅನುಷ್ಕಾ ಶರ್ಮಾ ಎರಡು ಕೋಟಿ ರೂ. ದೇಣಿಗೆ ನೀಡಿದ್ದಾರೆ.
14ನೇ ಆವೃತ್ತಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೋವಿಡ್ ಕಾರಣದಿಂದ ಅರ್ಧದಲ್ಲೇ ಅಮಾನತಾದ ಕಾರಣ ಮುಂಬೈನ ತನ್ನ ನಿವಾಸಕ್ಕೆ ಆಗಮಿಸಿರುವ ವಿರಾಟ್ ಕೊಹ್ಲಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಭಾಗಿಯಾಗುವಂತೆ ಕರೆ ನೀಡಿದ್ದಾರೆ.
ಇದನ್ನೂ ಓದಿ:ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸಲು ಸುಪ್ರೀಂ ಸೂಚನೆ : ಕೇಂದ್ರಕ್ಕೆ ಹಿನ್ನಡೆ
ಹಿಂದೆಂದೂ ಕಂಡರಿಯದಂತಹ ಪರಿಸ್ಥಿತಿಯನ್ನು ನಮ್ಮ ದೇಶ ಎದುರಿಸುತ್ತಿದೆ. ನಾವೆಲ್ಲರೂ ಈಗ ಒಂದಾಗಬೇಕಿದೆ. ಆದಷ್ಟು ಜೀವಗಳನ್ನು ಉಳಿಸಬೇಕಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕೋವಿಡ್ ವಿರುದ್ಧ ಹೋರಾಟಕ್ಕೆ ಏಳು ಕೋಟಿ ರೂ. ಸಂಗ್ರಹಿಸುವ ಯೋಜನೆ ಹೊಂದಿದ್ದು, ಇದಕ್ಕಾಗಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಎರಡು ಕೋಟಿ ರೂ ನೀಡಿದ್ದಾರೆ.
ಈ ಹಿಂದೆ ಸಚಿನ್ ತೆಂಡೂಲ್ಕರ್, ಪ್ಯಾಟ್ ಕಮಿನ್ಸ್, ನಿಕೋಲಸ್ ಪೂರನ್ ಸೇರಿದಂತೆ ಹಲವರಯ ಪಿಎಂ ಕೇರ್ ಫಂಡ್ ಗೆ ದೇಣಿಗೆ ನೀಡಿದ್ದರು.