Advertisement
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು ಅಲಭ್ಯರಾಗಿದ್ದಾರೆ. ಈ ಬಗ್ಗೆ ಸ್ವತಃ ಬಿಸಿಸಿಐ ವರದಿ ಮಾಡಿದೆ.
Related Articles
Advertisement
ಭಾರತವು ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲನೆಯ ಪಂದ್ಯ ಜನವರಿ 25 ರಂದು ಹೈದರಾಬಾದ್ ನಲ್ಲಿ ಆರಂಭವಾಗದೆ. ಸರಣಿಯ ಎರಡನೇ ಪಂದ್ಯವು ಫೆಬ್ರವರಿ 2 ರಂದು ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಮರಳುವ ನಿರೀಕ್ಷೆಯಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉ.ನಾ) ಮತ್ತು ಅವೇಶ್ ಖಾನ್