Advertisement

ದ.ಆಫ್ರಿಕಾ ವಿರುದ್ಧ ಅಂತಿಮ ಟಿ20 ಪಂದ್ಯಕ್ಕಿಲ್ಲ ವಿರಾಟ್ ಕೊಹ್ಲಿ

05:48 PM Oct 03, 2022 | Team Udayavani |

ಇಂಧೋರ್:  ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಕ್ಟೋಬರ್ 4ರಂದು ಭಾರತವು ಹರಿಣಗಳನ್ನು ಎದುರಿಸಲಿದೆ.

Advertisement

ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಮವಾರ ಬೆಳಿಗ್ಗೆ ಮುಂಬೈಗೆ ಪ್ರಯಾಣ ಬೆಳೆಸಿದರು. ಅವರು ಉಳಿದ ಆಟಗಾರರೊಂದಿಗೆ ಇಂಧೋರ್ ಗೆ ಪ್ರಯಾಣಿಸಲಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ:ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ

ಟಿ 20 ವಿಶ್ವಕಪ್‌ ಗಾಗಿ ಪೂರ್ವಸಿದ್ಧತಾ ಶಿಬಿರಕ್ಕಾಗಿ ಭಾರತ ತಂಡ ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಮುಂಬೈನಲ್ಲಿ ಉಳಿದ ಭಾರತೀಯ ತಂಡವನ್ನು ಸೇರುವ ಸಾಧ್ಯತೆಯಿದೆ.

ಭಾರತವು ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಅಜೇಯ 2-0 ಮುನ್ನಡೆ ಸಾಧಿಸಿದೆ. ಭಾರತದ ಟಿ20 ತಂಡವು ಅಕ್ಟೋಬರ್ 6 ರಂದು ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಲಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next