Advertisement

Team India; ಟೆಸ್ಟ್ ಸರಣಿಗೆ ಮಾತ್ರ ಆಯ್ಕೆ ಮಾಡಿ ಎಂದ ವಿರಾಟ್ ಕೊಹ್ಲಿ

11:10 AM Nov 30, 2023 | Team Udayavani |

ನವದೆಹಲಿ: ಇತ್ತೀಚೆಗಷ್ಟೇ ಮುಕ್ತಾಯವಾದ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ ಬಾರಿಸಿದ ವಿರಾಟ್‌ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಏಕದಿನ ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದಾರೆ. ಈ ಬಗ್ಗೆ ಅವರು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ.

Advertisement

ಡಿ.10ರಿಂದ ಭಾರತ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಮೂರು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳನ್ನಾಡಲಿದೆ. ಸದ್ಯ ಕೊಹ್ಲಿ ಭಾರತ ಟಿ0 ತಂಡ ದಲ್ಲಿ ಆಡುತ್ತಿಲ್ಲ. ಆದರೆ, ಮೂರು ಏಕದಿನ ಪಂದ್ಯಗಳಿಗೂ ಲಭ್ಯವಿರುವುದಿಲ್ಲ ಎಂದು ಹೇಳಿದ್ದು, ಕಡೆಯ ಎರಡು ಟೆಸ್ಟ್‌ ಪಂದ್ಯಗಳಿಗೆ ಮಾತ್ರ ಲಭ್ಯನಿರುತ್ತೇನೆ ಎಂದು ಹೇಳಿದ್ದಾರೆ.

ಸದ್ಯ ವಿರಾಟ್‌ ಕೊಹ್ಲಿ, ಕುಟುಂಬ ಸದಸ್ಯರ ಜತೆಗೆ ಲಂಡನ್‌ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ

Advertisement

Udayavani is now on Telegram. Click here to join our channel and stay updated with the latest news.

Next