ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಮುಗ್ಗರಿಸಿದ್ದ ಟೀಂ ಇಂಡಿಯಾ ಟಿ20 ಸರಣಿಯಲ್ಲಿ ಉತ್ತಮ ಕಮ್ ಬ್ಯಾಕ್ ಮಾಡಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದು ಬೀಗಿದೆ.
ಈ ಸರಣಿ ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ನಾಯಕನಾಗಿ ಸತತ ಹತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದ ವಿರಾಟ್ ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಆಸೀಸ್ ವಿರುದ್ಧ ಗೆಲುವಿನೊಂದಿಗೆ ‘ಸೇನಾ’ ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ) ಟಿ20 ಸರಣಿ ಗೆದ್ದ ಮೊದಲ ಭಾರತೀಯ ನಾಯಕ ಎಂಬ ಗರಿಮೆಗೆ ವಿರಾಟ್ ಪಾತ್ರರಾಗಿದ್ದಾರೆ. ಈ ಹಿಂದೆ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ಸರಣಿ ಗೆಲುವು ಕಂಡಿದ್ದರು.
ಇದನ್ನೂ ಓದಿ:ಇಂಗ್ಲೆಂಡ್ ಕ್ರಿಕೆಟಿಗರಿಗೆ ಕೋವಿಡ್ ಸೋಂಕು? ರದ್ದುಗೊಂಡಿತು ಮೊದಲ ಏಕದಿನ
ವಿರಾಟ್ ಕೊಹ್ಲಿ ನಾಯಕನಾಗಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ನಲ್ಲಿ 2018ರಲ್ಲಿ ಟಿ20 ಸರಣಿ ಗೆದ್ದಿದ್ದರು. ಈ ವರ್ಷದ ಆರಂಭದಲ್ಲಿ ಕಿವೀಸ್ ವಿರುದ್ಧವೂ ಸರಣಿ ಗೆದ್ದಿದ್ದರು. ಇದೀಗ ಆಸೀಸ್ ವಿರುದ್ಧವೂ ಅವರದೇ ನೆಲದಲ್ಲಿ ಟಿ20 ಸರಣಿ ಜಯಿಸುವುದರೊಂದಿಗೆ ದಾಖಲೆಯ ಪುಟ ಸೇರಿದ್ದಾರೆ.
ರವಿವಾರ ಸಿಡ್ನಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ಆರು ವಿಕೆಟ್ ಅಂತರದ ಗೆಲುವು ಸಾಧಿಸಿತ್ತು. ಆಸೀಸ್ ನೀಡಿದ್ದ 195 ರನ್ ಗುರಿಯನ್ನು ಭಾರತ, ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಹಾಯದಿಂದ ನಾಲ್ಕು ವಿಕೆಟ್ ಕಳೆದುಕೊಂಡು ಜಯ ಸಾಧಿಸಿತ್ತು.