ಅಹಮದಾಬಾದ್: ರವಿವಾರ ರಾತ್ರಿ ಮೊಟೇರಾ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಗಳಿಸಿದೆ. ನಾಯಕ ವಿರಾಟ್ ಕೊಹ್ಲಿ ಮತ್ತೆ ಲಯಕ್ಕೆ ಮರಳಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕಟ್ ನಲ್ಲಿ 3000 ರನ್ ಗಳಿಸಿದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ಏಕೈಕ ಕ್ರಿಕೆಟರ್ ವಿರಾಟ್ ಕೊಹ್ಲಿ.
ಇದನ್ನೂ ಓದಿ:ಸಿ.ಎ. ಭವಾನಿ: ಒಲಿಂಪಿಕ್ಸ್ ಗೆ ಆಯ್ಕೆಯಾದ ಭಾರತದ ಮೊದಲ ಫೆನ್ಸರ್
ವಿರಾಟ್ 86ನೇ ಪಂದ್ಯದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಗರಿಷ್ಠ ರನ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್ ನ ಮಾರ್ಟಿನ್ ಗಪ್ಟಿಲ್ 99 ಪಂದ್ಯಗಳಲ್ಲಿ 2839 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ 109 ಪಂದ್ಯಗಳಲ್ಲಿ 2773 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಕಳೆದ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿದ ವಿರಾಟ್, ಟಿ20 ಕ್ರಿಕಟ್ ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ವಿರಾಟ್ 26 ಅಂತಾರಾಷ್ಟ್ರೀಯ ಟಿ20 ಅರ್ಧಶತಕ ಬಾರಿಸಿದ್ದಾರೆ.
ಇದನ್ನೂ ಓದಿ: 2ನೇ ಟಿ20: ಕೊಹ್ಲಿ, ಇಶಾನ್ ಶಾನ್‌ದಾರ್ ಬ್ಯಾಟಿಂಗ್ : ಭಾರತ 7 ವಿಕೆಟ್ ಜಯಭೇರಿ
ಇದೇ ವೇಳೆ ಕೊಹ್ಲಿ ಅತೀ ವೇಗವಾಗಿ 12000 ಅಂತಾರಾಷ್ಟ್ರೀಯ ರನ್ ಗಳಿಸಿದ ನಾಯಕ ಎಂಬ ದಾಖಲೆ ಬರೆದರು. ಮತ್ತು ಈ ಸಾಧನೆ ಮಾಡಿದ ಏಕೈಕ ಭಾರತೀಯ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕನಾಗಿ 11,207 ರನ್ ಗಳಿಸಿದ್ದರು.