ಮೊಹಾಲಿ: ಸತತ ಪಂದ್ಯದ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಚಾಲೆಂಜ್ ಗೆ ಸಿದ್ದವಾಗಿದೆ. ಗುರುವಾರದ ಡಬಲ್ ಹೆಡರ್ ನ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ವಿಶೇಷವೆಂದರೆ ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಬೆಂಗಳೂರು ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಪಂದ್ಯದಲ್ಲಿ ನೋವಿಗೆ ಒಳಗಾಗಿದ್ದ ಫಾಫ್ ಇಂದಿನ ಪಂದ್ಯದಲ್ಲಿ ಫೀಲ್ಡಿಂಗ್ ನಡೆಸದೆ ಬ್ಯಾಟಿಂಗ್ ಮಾತ್ರ ಮಾಡಲಿದ್ದಾರೆ. ಹೀಗಾಗಿ ವಿರಾಟ್ ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.
ಪಂಜಾಬ್ ತಂಡದ ನಾಯಕ ಶಿಖರ್ ಧವನ್ ಇನ್ನೂ ತಂಡಕ್ಕೆ ಆಗಮಿಸಿಲ್ಲ. ಹೀಗಾಗಿ ಕರ್ರನ್ ಮುನ್ನಡೆಸುತ್ತಿದ್ದಾರೆ. ಉಳಿದಂತೆ ಲಿವಿಂಗ್ ಸ್ಟೋನ್ ಮತ್ತು ರಬಾಡ ಬದಲು ನಥನ್ ಎಲ್ಲಿಸ್ ತಂಡಕ್ಕೆ ಮರಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್
ಪಂಜಾಬ್ ಕಿಂಗ್ಸ್: ಅಥರ್ವ ತೈಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್ (ನಾ), ಜಿತೇಶ್ ಶರ್ಮಾ (ವಿ.ಕೀ), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್