Advertisement

ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗಿಲ್ಲ ಅವಕಾಶ!

04:54 PM Feb 26, 2022 | Team Udayavani |

ಚಂಡೀಗಢ: ಮಾರ್ಚ್ 4 ರಿಂದ ಪ್ರಾರಂಭವಾಗುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್‌ಗೆ ಯಾವುದೇ ಪ್ರೇಕ್ಷಕರಿಗೆ ಅವಕಾಶ ನೀಡುವುದಿಲ್ಲ ಎಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸಿಇಒ ದೀಪಕ್ ಶರ್ಮಾ ಖಚಿತಪಡಿಸಿದ್ದಾರೆ. ಹೀಗಾಗಿ ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮುಚ್ಚಿದ ಬಾಗಿಲುಗಳ ಹಿಂದೆ ವಿರಾಟ್ ಕೊಹ್ಲಿ ತಮ್ಮ 100 ನೇ ಟೆಸ್ಟ್ ಪಂದ್ಯವನ್ನು ಆಡಬೇಕಾಗಿದೆ.

Advertisement

ಗಮನಾರ್ಹವೆಂದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಭಾರತವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಕೊಹ್ಲಿ ತಮ್ಮ 100 ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾವನ್ನು ಭಾರತ ಮೊಹಾಲಿಯಲ್ಲಿ ಎದುರಿಸಲಿದ್ದು, ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

“ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟನ್ನು ಯಾವುದೇ ಪ್ರೇಕ್ಷಕರಿಗೆ ಅನುಮತಿಸದೆ ಮುಚ್ಚಿದ ಬಾಗಿಲಿನ ಹಿಂದೆ ಆಡಲಾಗುತ್ತದೆ” ಎಂದು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸಿಇಒ ದೀಪಕ್ ಶರ್ಮಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ:ರಣಜಿ ಟ್ರೋಫಿ: ಮಗಳ ನಿಧನದ ದುಃಖದ ನಡುವೆಯೂ ಶತಕ ಸಿಡಿಸಿದ ವಿಷ್ಣು ಸೋಲಂಕಿ

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ 2-1 ಅಂತರದಿಂದ ಸೋಲನುಭವಿಸಿದ ನಂತರ, ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದರು. ಇದೀಗ ಮೂರು ಮಾದರಿ ತಂಡಕ್ಕೆ ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ನಾಯಕನಾಗಿ ಮೊದಲ ಟೆಸ್ಟ್ ಪಂದ್ಯವನ್ನು ಅವರು ಲಂಕಾ ವಿರುದ್ಧ ಮೊಹಾಲಿಯಲ್ಲಿ ಆಡಲಿದ್ದಾರೆ.

Advertisement

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು 68 ಟೆಸ್ಟ್ ಪಂದ್ಯಗಳಲ್ಲಿ 40 ಗೆಲುವು ಕಂಡಿತ್ತು. ಸ್ಟೀವ್ ವಾ, ಡಾನ್ ಬ್ರಾಡ್ಮನ್ ಮತ್ತು ರಿಕಿ ಪಾಂಟಿಂಗ್ ನಂತರ ಕೊಹ್ಲಿ ನಾಲ್ಕನೇ ಅತ್ಯುತ್ತಮ ಗೆಲುವಿನ ಶೇಕಡಾವಾರು ಹೊಂದಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ ತಂಡ 2021 ರಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ ಗೇರಿತ್ತು.

ಇದುವರೆಗೆ 99 ಟೆಸ್ಟ್ ಪಂದ್ಯವಾಡಿರುವ ವಿರಾಟ್ ಕೊಹ್ಲಿ 50.4ರ ಸರಾಸರಿಯಲ್ಲಿ 7962 ರನ್ ಗಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next