Advertisement

ಮುಂಗಾರು ಹಿನ್ನೆಲೆ : 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಿಎಂ ವೀಡಿಯೋ ಸಂವಾದ

04:07 AM Jun 19, 2021 | Team Udayavani |

ಬೆಂಗಳೂರು : ಮುಂಗಾರು ಕೃಷಿ ಚಟುವಟಿಕೆ ಮತ್ತು ಪ್ರವಾಹ ಆತಂಕದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಶನಿವಾರ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಸಂವಾದ ನಡೆಸಲಿದ್ದಾರೆ.

Advertisement

ಕೃಷ್ಣಾ ಕಣಿವೆ ಪಾತ್ರದಡಿ ಸಮರ್ಪಕ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಹಾಗೂ ಮುಂಗಾರು ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಡಳಿತಗಳ ಜತೆ ಸಮಾಲೋಚನೆ ನಿಗದಿಯಾಗಿದೆ.

ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರವಾಹ ಉಂಟಾದಲ್ಲಿ ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಚಿವರ ಜತೆ ಚರ್ಚಿಸಲಾಗಿದೆ. ಶನಿವಾರ ಮಹಾರಾಷ್ಟ್ರದ ನೀರಾವರಿ ಸಚಿವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಚರ್ಚಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next