Advertisement
ಬೀದರ್‌ನಲ್ಲಿ 12 ಮಂದಿಗೆ ಬ್ಲ್ಯಾಕ್ ಫಂಗಸ್ ತಗುಲಿರುವ ಆತಂಕ ಎದುರಾಗಿದೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಕಣ್ಣು, ಮೂಗು, ಹಲ್ಲಿನ ಸಮಸ್ಯೆ ಎಂದು ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆಗೆ ತೆರಳಿದ್ದ ಸುಮಾರು 10ಕ್ಕೂ ಹೆಚ್ಚು ಜನರಲ್ಲಿ ಈ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.
ಕೊರೊನಾ ಸೋಂಕುಪೀಡಿತರಲ್ಲಿ ಕಪ್ಪು ಶಿಲೀಂಧ್ರ ಕಾಣಿಸುತ್ತಿರುವುದು ಹೆಚ್ಚಾಗಿದೆ ಎಂದು ಏಮ್ಸ್ ಮುಖ್ಯಸ್ಥ ರಣ್‌ದೀಪ್ ಗುಲೇರಿಯಾ ಹೇಳಿದ್ದಾರೆ. ಆಸ್ಪತ್ರೆ ಗಳಲ್ಲಿ ಇದರ ನಿಯಂತ್ರಣಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
Related Articles
Advertisement
ಈ ಮಧ್ಯೆ ಹರಿಯಾಣ ಸರಕಾರವು ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಾಗುತ್ತಿರುವುದನ್ನು ಮನಗಂಡಿದ್ದು, ಇದನ್ನು ಅಧಿಸೂಚಿತ ರೋಗವೆಂದು ಗುರುತಿಸಿದೆ. ಒಂದು ವೇಳೆ ಈ ರೋಗವೇನಾದರೂ ಕಂಡುಬಂದರೆ ಮುಖ್ಯ ವೈದ್ಯಕೀಯ ಅಧಿಕಾರಿಗೆ ವರದಿ ಮಾಡ ಬೇಕು ಎಂದು ಸೂಚಿಸಿದೆ.