Advertisement

Visakhapatnam ಬಂದರಿನಲ್ಲಿ ಭಾರಿ ಅಗ್ನಿ ಅವಘಡ, 40 ಕ್ಕೂ ಹೆಚ್ಚು ದೋಣಿಗಳು ಬೆಂಕಿಗಾಹುತಿ

10:14 AM Nov 20, 2023 | sudhir |

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ,

Advertisement

ಅಗ್ನಿ ಅವಘಡದಿಂದ ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದೆ. ಈ ಘಟನೆಯಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಈ ನಡುವೆ ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈಗಾಗಲೇ 40 ಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದ ಸ್ಥಳೀಯರು. ಮಾಹಿತಿ ಪಡೆದ ಬಂದರು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯನ್ನು ನಂದಿಸಲು ಅಧಿಕಾರಿಗಳು ವಿಶಾಖಪಟ್ಟಣಂ ಅಂಚೆ ಪ್ರಾಧಿಕಾರದಿಂದ ವಿಶೇಷ ಅಗ್ನಿಶಾಮಕ ದೋಣಿಯನ್ನು ತಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

Advertisement

ಅವಘಡದ ವೇಳೆ ಬೋಟ್ ಗಳಲ್ಲಿ ಮಲಗಿದ್ದವರು ಬೆಂಕಿಗೆ ಆಹುತಿಯಾಗಿರಬಹುದು ಎಂದು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅಪರಿಚಿತರು ಉದ್ದೇಶಪೂರ್ವಕವಾಗಿ ದೋಣಿಗೆ ಬೆಂಕಿ ಹಚ್ಚಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಈ ಘಟನೆಯಿಂದ ಲಕ್ಷಗಟ್ಟಲೆ ಆಸ್ತಿ ನಷ್ಟವಾಗಿದೆ ಎಂದು ಬೋಟ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 25 ರಿಂದ 30 ಕೋಟಿ ಮೌಲ್ಯದ ಆಸ್ತಿ ಹಾನಿಯಾಗಿದೆಯಂತೆ. ಅವಘಡದ ವೇಳೆ ಕೆಲವು ಬೋಟ್ ಗಳು ಆಗ ತಾನೇ ಮೀನುಗಾರಿಕೆ ಮುಗಿಸಿ ಮೀನುಗಾರಿಕಾ ಬಂದರಿಗೆ ಬಂದಿದ್ದವು. ಕೆಲವು ಬೋಟ್ ಗಳು ಇಂಧನ ತುಂಬಿಸಿಕೊಂಡು ಮಿಣಿಗಾರಿಕೆಗೆ ತೆರಳಲು ಸಿದ್ಧತೆ ನಡೆಸಿದ್ದವು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಮಾರಾಟಕ್ಕೆ ಸಿದ್ಧವಾಗಿದ್ದ ಮತ್ಸ್ಯ ಸಂಪತ್ತೆಲ್ಲ ಸುಟ್ಟು ಬೂದಿಯಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: World Cup ಫೈನಲ್ ನಲ್ಲಿ ಭಾರತಕ್ಕೆ ಸೋಲು: ಕೋಚ್ ಆಗಿ ಮುಂದುವರೆಯುತ್ತಾರಾ ದ್ರಾವಿಡ್ ?

Advertisement

Udayavani is now on Telegram. Click here to join our channel and stay updated with the latest news.

Next