Advertisement

ವಿಶಾಲ್‌ ಗೆ ಕನ್ನಡ ಚಿತ್ರಗಳಲ್ಲಿ ನಟಿಸುವ ಆಸೆ

03:13 PM Dec 17, 2022 | Team Udayavani |

ಸದ್ಯ ಕನ್ನಡದ ಸಿನಿಮಾಗಳು ದೇಶ-ವಿದೇಶಗಳಲ್ಲಿ ಜೋರಾಗಿ ಸದ್ದು ಮಾಡುತ್ತಿವೆ. ಭಾರತೀಯ ಚಿತ್ರರಂಗದ ಬೇರೆ ಬೇರೆ ಭಾಷೆಯ ಸ್ಟಾರ್‌ ನಟ-ನಟಿಯರು ಕೂಡ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸುವ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಈಗ ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಮತ್ತೂಂದು ಹೆಸರು ತಮಿಳಿನ ಸ್ಟಾರ್‌ ನಟ ವಿಶಾಲ್‌.

Advertisement

ಹೌದು, ತಮಿಳು ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ವಿಶಾಲ್‌ ಅವರಿಗೂ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸುವ ಆಸೆ ಇದೆಯಂತೆ. ಇತ್ತೀಚೆಗಷ್ಟೇ ತಮ್ಮ “ಲಾಠಿ’ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ನಟ ವಿಶಾಲ್‌ ತಮ್ಮ ಇಂಥದ್ದೊಂದು ಆಸೆಯನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದಾರೆ.

“ನಮ್ಮ ತಂದೆಯವರು ಮೂಲತಃ ಕನ್ನಡಿಗರು. ನಾನು ಕನ್ನಡ ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನೋದು ನನ್ನ ತಂದೆಯ ಕನಸು. ಕನ್ನಡದಲ್ಲಿ ಉತ್ತಮ ಅಭಿರುಚಿಯ ಸಿನಿಮಾಗಳು ಬರುತ್ತಿದೆ. ನನಗೂ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಬೇಕೆಂಬ ಆಸೆಯಿದೆ. ತಂದೆಯ ಆಸೆ ಈಡೇರಿಸಲು ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತೇನೆ. ಕನ್ನಡ ಚಿತ್ರರಂಗದಿಂದ ಈಗಾಗಲೇ ನನಗೆ ಆಫ‌ರ್‌ ಬಂದಿದೆ. 2023ರಲ್ಲಿ ನಾನು ಈಗಾಗಲೇ ಒಪ್ಪಿಕೊಂಡಿರುವ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಲಿದ್ದೇನೆ. ಹಾಗಾಗಿ 2024ರಲ್ಲಿ ಖಂಡಿತವಾಗಿಯೂ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೇನೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next