Advertisement

ದೆಹಲಿಯಲ್ಲಿ ವಿಷ್ಣುವರ್ಧನ್‌ ಪ್ರತಿಮೆ

10:15 AM Jun 24, 2017 | |

ಡಾ. ವಿಷ್ಣು ಸೇನಾ ಸಮಿತಿಯಿಂದ ಆಗಸ್ಟ್‌ 27ರಂದು ದೆಹಲಿಯ ಕನ್ನಡ ಸಂಘದ ಆವರಣದಲ್ಲಿ ಡಾ. ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವವನ್ನು ಏರ್ಪಡಿಸಲಾಗಿದೆ. ವಿಶೇಷವೆಂದರೆ, ಈ ಸಮಾರಂಭದಲ್ಲಿ ಡಾ. ವಿಷ್ಣುವರ್ಧನ್‌ ಅವರ ಆರಡಿ ಎತ್ತರದ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದಂತೆ.

Advertisement

ಇದೇ ಮೊದಲ ಬಾರಿಗೆ ಕರ್ನಾಟಕವನ್ನು ಬಿಟ್ಟು ಹೊರಗೆ, ಅದೂ ದೆಹಲಿಯಲ್ಲಿ ರಾಷ್ಟ್ರೀಯ ಉತ್ಸವವನ್ನು ಆಯೋಜಿಸುವುದಕ್ಕೆ ಸೇನಾ ಸಮಿತಿ ಮುಂದಾಗಿದೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಈ ಉತ್ಸವದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 500ಕ್ಕೂ ಹೆಚ್ಚು ವಿಷ್ಣು ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಇನ್ನು ಅಂದಿನ ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್‌ ಅವರು ಭಾಗವಹಿಸುವ ಸಾಧ್ಯತೆ ಇದ್ದು, ಸದ್ಯದಲ್ಲೇ ಅವರನ್ನು ಭೇಟ ಮಾಡಿ, ಆಹ್ವಾನ ನೀಡಲಾಗುವುದು ಎಂದು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next