ಉಡುಪಿ: ಸಾಂಸ್ಕೃತಿಕವಾಗಿ ಬಂಟ ಸಮುದಾಯದ ಕೊಡುಗೆ ಅಪಾರ ಮತ್ತು ಅನನ್ಯ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ್ ಆಳ್ಳ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ರವಿವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಬಂಟರ ಸಮ್ಮೇಳನದ ಸಾಂಸ್ಕೃತಿಕ ವೈಭವ ಉದ್ಘಾಟಿಸಿ ಮಾತನಾಡಿದರು.
ಪೂರ್ವಜರ ತ್ಯಾಗ ಮತ್ತು ಶ್ರಮದ ಫಲವಾಗಿ ಬಂಟರು ವೈಶಿಷ್ಟ್ಯಮಯ ಸಾಂಸ್ಕೃತಿಕ ಸೌಂದರ್ಯ ಪ್ರಜ್ಞೆ ಹೊಂದಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ಯಕ್ಷಗಾನ ಕ್ಷೇತ್ರಕ್ಕೆ ಬಂಟರ ಕೊಡುಗೆ ಅಪಾರವಾಗಿದೆ. ಕೃಷಿ, ಜೀವನಮೌಲ್ಯ ಸೇರಿದಂತೆ ಕರಾವಳಿ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಬಂಟರ ಪಾತ್ರ ಪ್ರಮುಖವಾಗಿದೆ ಎಂದರು.
ಹೇರಂಬ ಇಂಡಸ್ಟ್ರೀಸ್ ಲಿ. ಮುಂಬಯಿ ಸಿ. ಎಂ. ಡಿ. ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯನ್ನು ಉದ್ಘಾಟಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಒಡಿಯೂರು ಗುರು ದೇವದತ್ತ ಸಂಸ್ಥಾನದ ಗುರು ದೇವಾನಂದ ಸ್ವಾಮೀಜಿ ಆಶಿರ್ವಚನ ನೀಡಿದರು.
ಕೇಂದ್ರ ರೈತ ಕಲ್ಯಾಣ ಮತ್ತು ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ಕಿರಣ್ ಕೂಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಮೆರಿಟ್ ಹಾಸ್ಪಿಟಾಲಿಟಿ ಪ್ರೈ. ಲಿ. ಸಿಎಂಡಿ ಬೆಲ್ಲಾಡಿ ಅಶೋಕ್ ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ ಸಿಎಂಡಿ, ದ. ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ, ಗಣ್ಯರಾದ ಚಂದ್ರಿಕಾ ಹರೀಶ್ ಶೆಟ್ಟಿ, ವೀಣಾ ಶೆಟ್ಟಿ, ಒಕ್ಕೂಟದ ಪ್ರಮುಖರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಚಂದ್ರಹಾಸ ಡಿ. ಶೆಟ್ಟಿ, ಕರ್ನೂರ್ ಮೋಹನ್ ರೈ ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ವಂದಿಸಿ, ಅಶೋಕ್ ಪಕ್ಕಳ ವಂದಿಸಿದರು.