Advertisement

ವರ್ಷಾಂತ್ಯಕ್ಕೆ ವಿಶ್ವ ಕನ್ನಡ ಸಮ್ಮೇಳನ

04:30 AM Jul 19, 2017 | Team Udayavani |

ಬೆಂಗಳೂರು: ದಾವಣಗೆರೆಯಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನ ಈ ವರ್ಷಾಂತ್ಯಕ್ಕೆ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ಬರ ಇರುವುದರಿಂದ ಸಮ್ಮೇಳನ ಅಗತ್ಯ ಇದೆಯೇ? ಮುಂದೂಡಬಹುದಲ್ಲವೇ ಎಂಬ ಪ್ರಶ್ನೆಯೂ ಕೇಳಿ ಬಂತಾದರೂ ಅಂತಿಮವಾಗಿ ನಾಡು – ನುಡಿ, ಸಂಸ್ಕೃತಿಯ ರಕ್ಷಣೆ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಒಪ್ಪಿಗೆ ದೊರೆಯಿತು. ಡಿಸೆಂಬರ್‌ ಮೊದಲನೇ ಅಥವಾ ಎರಡನೇ ವಾರದಲ್ಲಿ ಸಮ್ಮೇಳನ ನಡೆಯಲಿದ್ದು, ಭಾರತರತ್ನ ಸಿ.ಎನ್‌. ರಾವ್‌ ಅವರಿಂದ ಸಮ್ಮೇಳನ ಉದ್ಘಾಟನೆ ಮಾಡಿಸಬೇಕು ಎಂಬ ಒತ್ತಾಯ ಸಭೆಯಲ್ಲಿ ಕೇಳಿ ಬಂದಿದ್ದು, ಸರಕಾರ ಆ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ.

Advertisement

ಸಭೆ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರಿ, ಈ ವರ್ಷದ ಕೊನೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ಸರಕಾರ ನಿರ್ಧರಿಸಿದೆ ಎಂದರು. ಸಮ್ಮೇಳನ ನಡೆಸಲು ಸಾಹಿತಿ-ಚಿಂತಕರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಬರ ಬಗ್ಗೆ ಪ್ರಸ್ತಾವಿಸಿದರು. ಆದರೆ, ನಾಡು – ನುಡಿ ರಕ್ಷಣೆ ವಿಚಾರದಲ್ಲಿ ಸರಕಾರದ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next