ಉಡುಪಿ: ಸಂಘಟನೆಯಿಂದ ನಮ್ಮ ಒಗ್ಗಟ್ಟು ಪ್ರದರ್ಶಿಸುವುದರೊಂದಿಗೆ ಬೇಡಿಕೆಗಳನ್ನು ವ್ಯಕ್ತಪಡಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿಶ್ವಕರ್ಮ ಸಮಾಜದವರು ಒಂದಾಗಬೇಕು. ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ತಿಳಿಸಿದರು.
Advertisement
ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೇತೃತ್ವದಲ್ಲಿ ರವಿವಾರ ನಡೆದ ದೇವಶಿಲ್ಪಿ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿದರು.
ಕಬ್ಬಿಣದ ಶಿಲ್ಪಿ ಕೃಷ್ಣಯ್ಯ ಆಚಾರ್ಯ, ಕಾಷ್ಠಶಿಲ್ಪಿ ರಂಜಾಳ ಸೀತಾರಾಮ ಆಚಾರ್ಯ, ಕಂಚು ಶಿಲ್ಪಿ ಬಿಳಿಯಾರು ವಿಟಲ ಆಚಾರ್ಯ, ಶಿಲಾ ಶಿಲ್ಪಿ ರಾಮಕೃಷ್ಣ ಆಚಾರ್ಯ ಹಾಗೂ ಸುವರ್ಣ ಶಿಲ್ಪಿ ಕೃಷ್ಣ ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು. ವಿದ್ವಾನ್ ಚಂದ್ರಕಾಂತ ಪುರೋಹಿತ್ ಉಪನ್ಯಾಸ ನೀಡಿದರು. ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ವೆಂಕಟೇಶ ಆಚಾರ್ಯ, ದ.ಕ. ಮತ್ತು ಉಡುಪಿ ಜಿಲ್ಲೆ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಹರೀಶ್ ಆಚಾರ್ಯ, ಕೋಶಾಧಿಕಾರಿ ದಿವಾಕರ ಆಚಾರ್ಯ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಬಿ.ಎ. ಆಚಾರ್ಯ ಮಣಿಪಾಲ ನಿರ್ವಹಿಸಿದರು.
Related Articles
ಮಂಗಳೂರು: ದ.ಕ. ಜಿಲ್ಲಾಡಳಿತ, ಜಿ. ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ರವಿವಾರ ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಕೇಂದ್ರದ ಮೀನುಗಾರಿಕೆ ಸಚಿವ ಪರಷೋತ್ತಮ್ ರೂಪಾಲಾ ಉದ್ಘಾಟಿಸಿದರು.
Advertisement
ವಿಶ್ವಕರ್ಮ ಸಮುದಾಯವನ್ನು ಮೊದಲಬಾರಿಗೆ ಕೇಂದ್ರ ಸರಕಾರದೊಂದಿಗೆ ಜೋಡಿಸುವ “ಪಿಎಂ ವಿಶ್ವಕರ್ಮ’ ಯೋಜನೆಗೆ ಪ್ರಧಾನಿಮೋದಿಯವರು ವಿಶ್ವಕರ್ಮ ಜಯಂತಿಯಂದೇ ಚಾಲನೆ ನೀಡುತ್ತಿದ್ದಾರೆ. ಮಂಗಳೂರಿನಲ್ಲಿ ಈ ಯೋಜನೆ ಉದ್ಘಾಟಿಸುವ ಮೊದಲು ವಿಶ್ವಕರ್ಮ ಜಯಂತಿಯಲ್ಲಿ ಪಾಲ್ಗೊಳ್ಳುವ ಮೂಲಕ ದೇವರ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದಂತಾಗಿದೆ ಎಂದರು. ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ, ಕಾರ್ಪೋರೆಟರ್ ಸಂಧ್ಯಾ ಮೋಹನ್, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಮುಂತಾದವರು ಉಪಸ್ಥಿತರಿದ್ದರು. ಜಿ. ಯಶವಂತ ಆಚಾರ್ಯ ಶ್ರೀ ವಿಶ್ವಕರ್ಮ ಜಯಂತಿ ಸಂದೇಶ ನೀಡಿದರು. ಸುಜೀರ್ ವಿನೋದ್ ಸ್ವಾಗತಿಸಿ ನಿರೂಪಿಸಿದರು. ಜಗದೀಶ್ ಸಿದ್ದಕಟ್ಟೆ ವಂದಿಸಿದರು.