Advertisement
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾರನ್ನೂ ಯಾರಿಗೂ ಹೋಲಿಕೆ ಮಾಡಬಾರದು ಎಂದು ಉದಾಹರಣೆ ಸಹಿತ ಹೇಳಿದರು.ಹೆಚ್ಚು ಅನುದಾನ ಭರವಸೆ ವಿಶ್ವಕರ್ಮ ಸಮುದಾಯದ ಮುಖಂಡರು ಮಕ್ಕಳ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಮೀನು ಕೇಳಿದ್ದಾರೆ. ಜತೆಗೆ ಕರಕುಶಲ ಕರ್ಮಿಗಳ ಇಲಾಖೆ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಜತೆಗೆ ನಿಮಗಕ್ಕೆ ಹೆಚ್ಚಿನ ಅನುದಾನ ನೀಡಲೂ ಮುಂದಿನ ದಿನಗಳಲ್ಲಿ ಪ್ರಯತ್ನಿಸುತ್ತೇನೆ ಎಂದರು.
ವಿಶ್ವಕರ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿದ್ದೆ. ಬಿಂಬಾರಾಯ್ಕರ್, ರಘು ಆಚಾರ್ಯ ಸಹಿತ ವಿಶ್ವಕರ್ಮ ಸಮುದಾಯದ ಹಲವರಿಗೆ ರಾಜಕೀಯ ಪ್ರಾತಿನಿಧ್ಯ ಮತ್ತು ಅಧಿಕಾರ ವನ್ನು ಒದಗಿಸಿಕೊಟ್ಟಿದ್ದೆ. ರಘು ಆಚಾರ್ಯ ದುಡುಕಿ ಕಾಂಗ್ರೆಸ್ ತೊರೆದರು. ನಾನು ಎಷ್ಟು ಹೇಳಿದರೂ ಕೇಳಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪ್ರತಿಯೊಂದು ಜಾತಿ, ಸಮುದಾಯಗಳಿಗೂ ಅವಕಾಶ ಮತ್ತು ಅಧಿಕಾರವನ್ನು ನಿರಂತರವಾಗಿ ಒದಗಿಸುತ್ತಲೇ ಬಂದಿದೆ. ಆ ಮೂಲಕ ಹಿಂದುಳಿದ ಸಮುದಾಯಗಳಿಗೆ, ದಲಿತ ಸಮುದಾಯಗಳಿಗೂ ಶಕ್ತಿ ತುಂಬುತ್ತಿದೆ ಎಂದು ಹೇಳಿದರು.
Related Articles
ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಜತೆಗೆ ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯನ್ನೂ ಪರಿಶೀಲಿಸಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿ ಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ ಹೆಚ್ಚು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.
Advertisement
ಹಿಂದೇಟು ಹಾಕುವುದಿಲ್ಲಸರಕಾರ ಆಚರಿಸುವ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಹಿಂದೇಟು ಹಾಕುವುದಿಲ್ಲ. ಸರಕಾರದ ವತಿಯಿಂದ ಜನಾಂಗದ ಕಾರ್ಯಕ್ರಮ ಆಚರಿಸಿದರೆ ಹೆಚ್ಚು ಮಹತ್ವ ಇರುತ್ತದೆ. ಹಾಗಾಗಿ ಸರಕಾರವೇ ಅನೇಕ ಹಿಂದುಳಿದ ಜಯಂತ್ಯೋತ್ಸವವನ್ನು ಆಚರಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.