Advertisement

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಶ್ವನಾಥ್‌ ಮುಂದುವರಿಕೆ: ರೇವಣ್ಣ

07:09 AM Jun 20, 2019 | Lakshmi GovindaRaj |

ಬೆಂಗಳೂರು: “ಎಚ್‌.ವಿಶ್ವನಾಥ್‌ ಅವರು ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ’ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

Advertisement

ಸುದ್ದಿಗಾರರ ಜೊತೆ ಮಾತನಾಡಿ, ಈ ಬಗ್ಗೆ ದೇವೇಗೌಡರು ಅವರ ಮನವೊಲಿಸುತ್ತಾರೆ. ಪಕ್ಷ ನನಗೆ ಲೋಕೋಪಯೋಗಿ ಸಚಿವನಾಗಿ ಕೆಲಸ ಮಾಡುವ ಜವಾಬ್ದಾರಿ ನೀಡಿದೆ. ನಾನು ರಾಜ್ಯಾಧ್ಯಕ್ಷ ಹುದ್ದೆ ಹೊರುವಷ್ಟು ದೊಡ್ಡವನಲ್ಲ. ಸಮನ್ವಯ ಸಮಿತಿಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರಿಗೆ ಸ್ಥಾನ ಕಲ್ಪಿಸುವ ಬಗ್ಗೆ ದೇವೇಗೌಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಹಾಗೂ ನಿಖಿಲ್‌ಗೆ ಸದ್ಯಕ್ಕೆ ಯಾವುದೇ ಸ್ಥಾನ ನೀಡುವುದು ಬೇಡ ಎಂಬ ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ವೈ ಎಸ್‌.ವಿ.ದತ್ತಾ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್‌ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಾರೆ. ದೇವೇಗೌಡರು ನನಗೂ ಪಕ್ಷದಲ್ಲಿ ಯಾವುದೇ ಹುದ್ದೆ ನೀಡಿರಲಿಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ, ದೇವೇಗೌಡರಿಗಾಗಿ ಈಗಲೂ ರಾಜೀನಾಮೆ ನೀಡಿ ಕ್ಷೇತ್ರ ಬಿಟ್ಟುಕೊಡುವ ನಿರ್ಧಾರಕ್ಕೆ ಬದ್ಧನಾಗಿದ್ದಾನೆ. ಆದರೆ, ದೇವೇಗೌಡರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆಯೋ ಅದಕ್ಕೆ ಬದ್ದನಾಗಿ ಕೆಲಸ ಮಾಡುತ್ತಾನೆ. ಗುರುವಾರ ನೂತನ ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಗೆ ತೆರಳುತ್ತಿದ್ದಾನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next