ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಶೆಣೈ, ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ “ವಿಶ್ವಪ್ರಭಾ ಪುರಸ್ಕಾರ-2023’ಕ್ಕೆ ಈ ಬಾರಿ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ| ಸಂಧ್ಯಾ ಎಸ್. ಪೈ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ಪ್ರಶಸ್ತಿ ಪತ್ರ, ಫಲಕದೊಂದಿಗೆ 1 ಲ.ರೂ. ನಗದು ಬಹುಮಾನ ಒಳಗೊಂಡಿದ್ದು, 2023ರ ಜನವರಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ರಾವ್ ಕಾವೂರ್ ರಚಿಸಿದ ಡಾ| ಜೀವನ್ರಾಮ್ ಸುಳ್ಯ ನಿರ್ದೇಶನದ “ಪರಶುರಾಮ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪುರಸ್ಕಾರ ಸಮಿತಿ ಸಂಚಾಲಕ ಮರವಂತೆ ನಾಗರಾಜ ಹೆಬ್ಟಾರ್ ತಿಳಿಸಿದ್ದಾರೆ.