Advertisement

65ನೇ ಕಾಮನ್‌ವೆಲ್ತ್‌ ಸಂಸದೀಯ ಸಮ್ಮೇಳನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ

09:33 PM Jul 14, 2022 | Team Udayavani |

ಬೆಂಗಳೂರು: ಕೆನಡಾದ ಹ್ಯಾಲಿಪ್ಯಾಕ್ಸ್‌ನಲ್ಲಿ ಆಗಸ್ಟ್‌ 22ರಿಂದ 26ರ ವರೆಗೆ ನಡೆಯುವ 65ನೇ ಕಾಮನ್‌ವೆಲ್ತ್‌ ಸಂಸದೀಯ ಸಮ್ಮೇಳನದಲ್ಲಿ ರಾಜ್ಯ ವಿಧಾನ ಸಭಾಧ್ಯಕ್ಷ ವಿಶೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ.

Advertisement

ಅವರು ಕಾಮನ್‌ವೆಲ್ತ್‌ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ  ಶುಕ್ರವಾರ ಹೊಸದಿಲ್ಲಿಯಲ್ಲಿ  ಪೀಠಾಸೀನಾಧಿಕಾರಿಗಳ ಸಭೆ ಕರೆದಿದ್ದು, ಇದರಲ್ಲಿ ಪಾಲ್ಗೊಳ್ಳಲು ಕಾಗೇರಿ ದಿಲ್ಲಿಗೆ ತೆರಳಿದ್ದಾರೆ ಎಂದು ಸಭಾಧ್ಯಕ್ಷ ಆಪ್ತ ಕಾರ್ಯದರ್ಶಿ ಡಾ| ಸಿ. ಆರ್‌. ಅಮರನಾಥ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next