Advertisement

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

12:34 AM Apr 27, 2024 | Team Udayavani |

ಶಿರಸಿ: ದೇಶದಲ್ಲಿ 250 ಅಭ್ಯರ್ಥಿಗಳನ್ನೂ ನಿಲ್ಲಿಸಲಾಗದ ಕಾಂಗ್ರೆಸ್‌ 50 ಸ್ಥಾನ ಕೂಡ ಗೆಲ್ಲಲಾಗದ ಸ್ಥಿತಿಯಲ್ಲಿದೆ. ಅಂಥ ಪಕ್ಷ ಪ್ರಣಾಳಿಕೆಯಲ್ಲಿ ಏನು ಭರವಸೆ ಕೊಟ್ಟರೇನು ಪ್ರಯೋಜನ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಹತಾಶಗೊಂಡಿದೆ. ಹೀಗಾಗಿ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಬಗ್ಗೆ ಪ್ರಸ್ತಾವಿಸಲಾಗಿದೆ. ಕಾಂಗ್ರೆಸ್‌ ನೇತೃತ್ವದ ಒಕ್ಕೂಟದ ಪಕ್ಷಗಳು ಪ್ರತ್ಯೇಕ ಪ್ರಣಾಳಿಕೆಗಳನ್ನು ಹೊರಡಿಸುತ್ತಿವೆ ಎಂದು ಟೀಕಿಸಿದರು.

ಹಿಂದುಳಿದ ವರ್ಗದ ಮೀಸಲಾತಿಯನ್ನು ಅಲ್ಪಸಂಖ್ಯಾಕ ಸಮುದಾ ಯಕ್ಕೂ ಹಂಚಿಕೆ ಮಾಡಲಾಗುತ್ತಿದೆ.
ಅಲ್ಪಸಂಖ್ಯಾಕರನ್ನು ಓಲೈಸಿ ಮತ ಗಳಿಸುವ ತಂತ್ರ ನಡೆದಿದೆ ಎಂದು ಆರೋಪಿಸಿದರು.

ನರೇಂದ್ರ ಮೋದಿ ಎ.28ರಂದು ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೆ ಆಗಮಿಸಲು ಮನೆ-ಮನೆಗೆ ಆಮಂತ್ರಣ ನೀಡುತ್ತಿದ್ದೇವೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಮೋದಿ ಅಲೆ ವ್ಯಾಪಕವಾಗಿದೆ. ಮತದಾರರು, ಕಾರ್ಯಕರ್ತರು ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿಯಾಗಿಸಲು ಸಹಕರಿಸಬೇಕು ಎಂದರು.

ಕಾಂಗ್ರೆಸ್‌ ಸುಳ್ಳನ್ನೇ ಸತ್ಯವಾಗಿಸುತ್ತಿದೆ. ಅಮಾವಾಸ್ಯೆಗೆ ಕಂಡ ಬಾವಿಯಲ್ಲಿ ಮತದಾರರು ಬೀಳಬಾರದು. ನಮ್ಮಲ್ಲಿ ಯಾವುದೇ ಬಣ ಇಲ್ಲ. ಕೇವಲ ಬಿಜೆಪಿ ಬಣ.
-ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಅಭ್ಯರ್ಥಿ

Advertisement

 

Advertisement

Udayavani is now on Telegram. Click here to join our channel and stay updated with the latest news.

Next