Advertisement
ಕಲಬುರಗಿ ವಿಷನ್-2050 ಕುರಿತಂತೆ ಬುಧವಾರ ಬೆಂಗಳೂರಿನ ವಿಕಾಸಸೌಧದಿಂದ ಶಿಕ್ಷಣ ವಿಷಯದ ಕುರಿತು ವಿಡಿಯೋ ಸಂವಾದದ ಮೂಲಕ ಶಿಕ್ಷಣ ತಜ್ಞರು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿ ಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
Related Articles
Advertisement
ಡಿಸಿ ವಾಸಿರೆಡ್ಡಿ ವಿಜಯಾ ಜ್ಯೋತ್ಸಾಮಾತನಾಡಿ, ಈಗಾಗಲೇ ಪ್ರವಾಸೋದ್ಯಮ,ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ವಾಣಿಜ್ಯ ಮತ್ತು ಕೈಗಾರಿಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡಾ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೌಶಲ್ಯಾಭಿವೃದ್ಧಿ ಸೇರಿ 14 ಉಪ ಸಮಿತಿ ರಚಿಸಲಾಗಿದೆ. ಅಲ್ಲದೇ, ಆರಂಭಿಕ ಸಭೆ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಾಕಷ್ಟು ಮೂಲ ಸೌಕರ್ಯಗಳಿದ್ದು, ಇದರ ಸದ್ಬಳಕೆಗೆ ಯೋಜನೆ ರೂಪಿಸಬೇಕಿದೆ. “ಎಜುಕೇಷನ್ ಹಬ್’ ಆಗುವ ಎಲ್ಲ ಅರ್ಹತೆಯನ್ನು ಜಿಲ್ಲೆ ಹೊಂದಿದೆ. ಐಎಎಸ್, ಐಪಿಎಸ್ ಸೇರಿದಂತೆ ನಾಗರಿಕ ಸೇವೆಗಳ ಪರೀಕ್ಷೆಗೆ ಸ್ಥಳೀಯ ಅಭ್ಯರ್ಥಿಗಳು ದೂರದ ಬೆಂಗಳೂರು, ದೆಹಲಿ, ಹೈದರಾಬಾದ್‌ಗೆ ಹೋಗುವುದನ್ನು ತಪ್ಪಿಸಲು ಇಲ್ಲಿಯೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ತೆರೆಯುವುದು ಅವಶ್ಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಪಂ ಸಿಇಒ ಡಾ| ದಿಲೀಷ್ ಸಸಿ ಮಾತನಾಡಿ, ಶಿಕ್ಷಣ ಕ್ಷೇತ್ರ ಸುಧಾರಣೆ ನಿಟ್ಟಿನಲ್ಲಿ ಮುಂದಿನ ಐದು ವರ್ಷದಲ್ಲಿ ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಒಳಗೊಂಡಂತೆ ಮೂಲಭೂತ ಸೌಕರ್ಯ, ಆಟದ ಮೈದಾನ ಒದಗಿಸುವುದು ಹೀಗೆ ಹಂತ-ಹಂತವಾಗಿ ಕಾಲಮಿತಿಯಲ್ಲಿ ಆಗಬೇಕಿದೆ.
ಶಿಕ್ಷಕರ ನೇಮಕಾತಿಗೂ ಚಾಲನೆ ನೀಡಬೇಕಿದೆ ಎಂದರು. ಡಿಡಿಪಿಐ ಅಶೋಕ ಭಜಂತ್ರಿ ಮಾತನಾಡಿ, ಕಳೆದ 2019-20ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 28ನೇ ಸ್ಥಾನದಿಂದ 22ನೇ ಸ್ಥಾನಕ್ಕೇರಿದ್ದು, ಶೇ.74.3ರಷ್ಟು ಫಲಿತಾಂಶ ಬಂದಿದೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನೊಂದಿಗೆ ಜಿಲ್ಲೆಯನ್ನು ಟಾಪ್ 10ರಲ್ಲಿ ಕೊಂಡೊಯ್ಯುವ ವಿಶ್ವಾಸವಿದೆ ಎಂದರು.
ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ, ಶಾಸಕ ಡಾ| ಅಜಯಸಿಂಗ್, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ನಗರ ಪೊಲೀಸ್ ಆಯುಕ್ತ ಡಾ| ವೈ.ಎಸ್. ರವಿಕುಮಾರ ಮಾತನಾಡಿದರು. ವಿಡಿಯೋ ಸಂವಾದದಲ್ಲಿ ಸಂಸದ ಡಾ| ಉಮೇಶ ಜಾಧವ, ಕೆಕೆಆರ್‌ಡಿಬಿ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಎಂ.ವೈ. ಪಾಟೀಲ, ಸುಭಾಷ ಗುತ್ತೇದಾರ, ಖನೀಜ್ ಫಾತಿಮಾ, ಡಾ| ಅವಿನಾಶ ಜಾಧವ, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಸುನೀಲ ವಲ್ಯಾಪುರೆ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ, ಎಸ್‌ಪಿ ಡಾ| ಸಿಮಿ ಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಇದ್ದರು.