Advertisement

ಉತ್ತರ ಪ್ರದೇಶದಲ್ಲಿ ಬರಲಿದೆ ದೂರದೃಷ್ಟಿಯ ಸಂಪುಟ?

01:53 AM Mar 15, 2022 | Team Udayavani |

ಲಕ್ನೋ: ಸದ್ಯದಲ್ಲೇ ಹೊಸದಾಗಿ ರಚನೆಯಾಗಲಿರುವ ಉತ್ತರ ಪ್ರದೇಶ ಸಂಪುಟವನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ದೃಷ್ಟಿಯಲ್ಲೇ ರಚಿಸಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Advertisement

ಹೊಸ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರು, ಸಹಾಯಕ ಸಚಿವರು ಸೇರಿ ಒಟ್ಟು 60 ಸದಸ್ಯರಿರಲಿದ್ದಾರೆ ಎಂದು ಹೇಳಲಾಗಿದೆ.

ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ದಿಲ್ಲಿಗೆ ಭೇಟಿ ನೀಡಿ ಅಲ್ಲಿನ ಬಿಜೆಪಿ ಹಿರಿಯ ನಾಯಕರನ್ನು ಭೇಟಿ ಮಾಡಿ, ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆಂದು ಬಿಜೆಪಿ ಆಂತರಿಕ ಮೂಲಗಳು ತಿಳಿಸಿವೆ.

ಈ ಪಟ್ಟಿಯನ್ನು ಕೂಲಂಕಷ ಚರ್ಚೆಗಳು, ಅಧ್ಯಯನದ ಆಧಾರದಲ್ಲಿ ಸಿದ್ಧಪಡಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ರಾಜ್ಯದ ಎಲ್ಲ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಪದಾಧಿಕಾರಿ ಬೆಂಕಿ;ಪ್ರಮುಖ ನಾಯಕರ ಜತೆ ಚರ್ಚಿಸದೇ ಪಟ್ಟಿ ಒಯ್ದರೇ ಡಿಕೆಶಿ ?

Advertisement

ಮೂರು ಡಿಸಿಎಂ?: ಕಳೆದ ಬಾರಿಯ ಯೋಗಿ ಸಂಪುಟದಲ್ಲಿ ಇಬ್ಬರು ಉಪ ಮುಖ್ಯ ಮಂತ್ರಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಮೂರು ಉಪ ಮುಖ್ಯಮಂತ್ರಿ ಸ್ಥಾನ ಕಲ್ಪಿಸಲು ನಿರ್ಧರಿಸಲಾಗಿದೆ. ಆದರೆ ಕಳೆದ ಬಾರಿ ಉಪ ಮುಖ್ಯಮಂತ್ರಿಯಾಗಿದ್ದ ಕೇಶವ್‌ ಪ್ರಸಾದ್‌ ಮೌರ್ಯ, ದಿನೇಶ್‌ ಸೀತಾರಾಂ ಅವರನ್ನು ಮಂತ್ರಿಮಂಡಲದಲ್ಲಿ ಮುಂದುವರಿಸಲಾಗುತ್ತದೆಯೇ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟತೆ ಯಿಲ್ಲ. ಇವರಲ್ಲಿ ಕೇಶವ್‌ ಪ್ರಸಾದ್‌ ಮೌರ್ಯ ಈ ಬಾರಿಯ ಚುನಾವಣೆಯಲ್ಲಿ ಸಿರಾತು ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.

ಡಿಸಿಎಂ ಸ್ಥಾನಗಳಿಗೆ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್‌ ಸಿಂಗ್‌, ಉತ್ತರಾಖಾಂಡದ ಮಾಜಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ, ಗುಜರಾತ್‌ ಕೇಡರ್‌ನ ಮಾಜಿ ಅಧಿಕಾರಿ ಎ.ಕೆ. ಮಿಶ್ರಾ ಹೆಸರು ಮಂಚೂಣಿಯಲ್ಲಿವೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next